ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಗ್ನಿ ಅವಘಡ: 9 ಮಕ್ಕಳಿಗೆ ಗಾಯ
ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ಗೆ ಬೆಂಕಿ ತಗಲು 9 ಮಕ್ಕಳಿಗೆ ಗಾಯವಾಗಿರುವ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಸತಾರಾ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ಗೆ ಬೆಂಕಿ ತಗಲು 9 ಮಕ್ಕಳಿಗೆ ಗಾಯವಾಗಿರುವ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಪ್ರಸಿದ್ಧ ಗಿರಿಧಾಮ ಮಹಾಬಲೇಶ್ವರದ ಕೋಲಿ ಆಲಿ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡಿರುವ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಜನರೇಟರ್ ಅಳವಡಿಸಲಾಗಿತ್ತು. ಸಮೀಪದಲ್ಲಿಯೇ ಪೆಟ್ರೋಲ್ ಕ್ಯಾನ್ ಇರಿಸಲಾಗಿತ್ತು. ಜನರೇಟರ್ ಬಿಸಿಯಾಗಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ವಾಹನದಲ್ಲಿ ಕುಳಿತಿದ್ದ ಮಕ್ಕಳಿಗೆ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸತಾರಾ ಮತ್ತು ಪುಣೆಯ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಇದೀಗ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


