ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಪ್ರಧಾನಿಗೆ ಆಮಂತ್ರಣ
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ.

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಗೆ ಇಂದು ಆಮಂತ್ರಣ ನೀಡಿತು.
ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ.
ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ ಟ್ರಸ್ಟ್ ನ ಭಾಗವಾಗಿ ರಾಜ್ಯದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಭಾಗಿಯಾಗಿದ್ದರು.
ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಅ.25 ರಂದು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


