ದೇಶ

'ನಮ್ಮ ಬಳಿ ಅತ್ಯುತ್ತಮ ಶೂಟರ್‌ಗಳಿದ್ದಾರೆ'; 20 ಕೋಟಿ ರೂ. ಕೊಡದಿದ್ದರೆ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, 20 ಕೋಟಿ ರೂ. ನೀಡಲು ವಿಫಲವಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

'ನಮ್ಮ ಬಳಿ ಅತ್ಯುತ್ತಮ ಶೂಟರ್‌ಗಳಿದ್ದಾರೆ'; 20 ಕೋಟಿ ರೂ. ಕೊಡದಿದ್ದರೆ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!
ಮುಕೇಶ್ ಅಂಬಾನಿ
Published On :

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, 20 ಕೋಟಿ ರೂ. ನೀಡಲು ವಿಫಲವಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

ಮುಂಬೈ ಪೊಲೀಸರ ಪ್ರಕಾರ, ಇಮೇಲ್‌ನಲ್ಲಿ 'ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಮ್ಮ ಬಳಿ ಭಾರತದ ಅತ್ಯುತ್ತಮ ಶೂಟರ್‌ಗಳು ಇದ್ದಾರೆ' ಎಂದು ಬರೆಯಲಾಗಿದೆ.

ಇಮೇಲ್ ಸ್ವೀಕರಿಸಿದ ನಂತರ ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.