ಕೊಚ್ಚಿ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಫೋಟ; ಸರ್ವಪಕ್ಷ ಸಭೆ ಕರೆದ ಕೇರಳ ಸಿಎಂ ಪಿಣರಾಯಿ ವಿಜಯನ್
ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಇಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ತಿರುವನಂತಪುರಂ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಇಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ.
ಇಂದು ಬೆಳಿಗ್ಗೆ ಕನ್ವೆನ್ಷನ್ ಸೆಂಟರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದು, 36ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ 10 ಗಂಟೆಗೆ ಸಚಿವಾಲಯದ ಕಾಂಪ್ಲೆಕ್ಸ್ನಲ್ಲಿರುವ ಮುಖ್ಯಮಂತ್ರಿಗಳ ಕಾನ್ಫರೆನ್ಸ್ ಸಭಾಂಗಣದಲ್ಲಿ ಸರ್ವಪಕ್ಷ ಸಭೆಗೆ ಪಿಣರಾಯಿ ವಿಜಯನ್ ಕರೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಹೇಳಿಕೆ ತಿಳಿಸಿದೆ.
ಕೊಚ್ಚಿಯ ಸಮಾವೇಶ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


