ಕೇರಳ: ಕಲಮಸ್ಸೆರಿಯಲ್ಲಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ
ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಪ್ರಾರ್ಥನಾ ಸಭೆಯಲ್ಲಿ ಸುಮಾರು 2,200-2,500 ಜನ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಈ ನಡುವೆ ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸರಣಿ ಸ್ಫೋಟದ ಹೊಣೆ ಹೊತ್ತಿಕೊಂಡಿದ್ದು, ತ್ರಿಶೂರ್‌ನ ಕೊಡಕರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಆದಾಗ್ಯೂ, ಮಾರ್ಟಿನ್ ಅವರ ಹೇಳಿಕೆಗಳನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


