ದೇಶ

ರಶೀದ್ ಖಾನ್ ಗೆ 10 ಕೋಟಿ ರೂ. ಬಹುಮಾನ: ರತನ್ ಟಾಟಾ ಹೇಳಿದ್ದು ಹೀಗೆ....

ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ರಶೀದ್ ಖಾನ್ ಗೆ 10 ಕೋಟಿ ರೂ. ಬಹುಮಾನ: ರತನ್ ಟಾಟಾ ಹೇಳಿದ್ದು ಹೀಗೆ....
ರಶೀದ್ ಖಾನ್
Published On :

ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಕುರಿತು ಇಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರತನ್ ಟಾಟಾ, ಯಾವುದೇ ಆಟಗಾರರಿಗೆ ದಂಡ ಅಥವಾ ಬಹುಮಾನದ ಬಗ್ಗೆ ಐಸಿಸಿ ಅಥವಾ ಯಾವುದೇ ಕ್ರಿಕೆಟ್ ಪ್ಯಾಕಲ್ಟಿಗೆ ಯಾವುದೇ ಸಲಹೆಗಳನ್ನು ನೀಡಿಲ್ಲ.
ನನಗೂ ಕ್ರಿಕೆಟ್‌ಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬರದ ಹೊರತು ಅಂತಹ ವಾಟ್ಸಾಪ್ ಫಾರ್ವರ್ಡ್‌ಗಳು ಮತ್ತು ವೀಡಿಯೊಗಳನ್ನು ದಯವಿಟ್ಟು ನಂಬಬೇಡಿ ಎಂದು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.