ಅಬಕಾರಿ ನೀತಿ ಹಗರಣ: ವಿಚಾರಣೆಗೆ ಹಾಜರಾಗುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್
ಸಿಬಿಐ ವಿಚಾರಣೆಗೊಳಪಡಿಸಿದ ಏಳು ತಿಂಗಳ ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಗುರುವಾರ ತನ್ನ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಕೇಳಿದೆ.

ನವದೆಹಲಿ: ಸಿಬಿಐ ವಿಚಾರಣೆಗೊಳಪಡಿಸಿದ ಏಳು ತಿಂಗಳ ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಗುರುವಾರ ತನ್ನ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಕೇಳಿದೆ.
ಮಾಜಿ ಉಪಮುಖ್ಯಮಂತ್ರಿ ಮತ್ತು ಕೇಜ್ರಿವಾಲ್ ಅವರ ಆಪ್ತ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಇಡಿ ಸಮನ್ಸ್ ನೀಡಿದೆ. ಈ ಪ್ರಕರಣದಲ್ಲಿ ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಕೂಡ ಬಂಧನದಲ್ಲಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಮುಖ್ಯಮಂತ್ರಿಗೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಿಖಾ ಸಂಸ್ಥೆಯಿಂದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿರುವುದು ಇದೇ ಮೊದಲು.
ಸಮನ್ಸ್‌ಗೆ ಪ್ರತಿಕ್ರಿಯಿಸಿದ ದೆಹಲಿ ಸಚಿವ ಮತ್ತು ಹಿರಿಯ ನಾಯಕ ಸೌರಭ್ ಭಾರಧ್ವಾಜ್, ಕೇಂದ್ರ ಸರ್ಕಾರಕ್ಕೆ ಒಂದೇ ಒಂದು ಗುರಿ ಇದೆ ಮತ್ತು ಅದು ಹೇಗಾದರೂ ಎಎಪಿಯನ್ನು ಮುಗಿಸುವುದು ಎಂಬುದು ಸ್ಪಷ್ಟವಾಗುತ್ತಿದೆ. 'ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಲು ಮತ್ತು ಎಎಪಿಯನ್ನು ಮುಗಿಸಲು ಅವರು ಸುಳ್ಳು ಪ್ರಕರಣ ಸೃಷ್ಟಿಸುವಲ್ಲಿ ಮುಂದಾಗಿದ್ದಾರೆ' ಎಂದು ಹೇಳಿದರು.
ಇ.ಡಿ ಪ್ರಶ್ನೆಗಳಿಗೆ ಸಿಎಂ ಉತ್ತರಿಸಬೇಕಾಗುತ್ತದೆ ಮತ್ತು ಅವರು ಆಮಿಷವೊಡ್ಡುವ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಹೇಳಿದ್ದಾರೆ. ಇದಕ್ಕೂ ಮುನ್ನ ಸಿಸೋಡಿಯಾಗೆ ಜಾಮೀನು ನಿರಾಕರಣೆ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿತ್ತು.
ಸಿಬಿಐ ಏಪ್ರಿಲ್ 16 ರಂದು ಕೇಜ್ರಿವಾಲ್ ಅವರನ್ನು 'ಸಾಕ್ಷಿ' ಎಂದು ಪರಿಗಣಿಸಿ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಅಬಕಾರಿ ನೀತಿಯ ಕೆಲಸ ಹೇಗೆ ಪ್ರಾರಂಭವಾಯಿತು ಮತ್ತು ಇತರ ವಿಷಯಗಳು ಸೇರಿದಂತೆ 56 ಪ್ರಶ್ನೆಗಳನ್ನು ಕೇಳಿತ್ತು. ಈ ವರ್ಷದ ಫೆಬ್ರುವರಿ 26 ರಂದು ಸಿಸೋಡಿಯಾ ಅವರನ್ನು ಬಂಧಿಸಿದ್ದರೆ, ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್ 4 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


