ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡು
ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು.

ರಾಜಮಹೇಂದ್ರವರಂ: ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು.
53 ದಿನಗಳ ಜೈಲುವಾಸ ಮುಗಿಸಿ ಸಂಜೆ 4-20ಕ್ಕೆ ಜೈಲಿನಿಂದ ಹೊರ ಬಂದ ಅವರನ್ನು ಕುಟುಂಬಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ಬರಮಾಡಿಕೊಂಡರು. ಜೈಲಿನ ಹೊರಗೆ ಸೇರಿದ್ದ ಸಾವಿರಾರು ಕಾರ್ಯಕರ್ತರು, ಟಿಡಿಪಿ ಧ್ವಜ ಹಾರಿಸುವ ಮೂಲಕ ನಾಯ್ಡು ಅವರಿಗೆ ಅದ್ದೂರಿ ಸ್ವಾಗತ ಕೋರಿದರು.
ಇಂದು ಬೆಳಗ್ಗೆ ಆಂಧ್ರ ಪ್ರದೇಶ ಹೈಕೋರ್ಟ್ ಅವರಿಗೆ ಅನಾರೋಗ್ಯ ನಿಮಿತ್ತ ನಾಲ್ಕು ವಾರಗಳ ಜಾಮೀನು ಮಂಜೂರು ಮಾಡಿತ್ತು. ನವೆಂಬರ್ 28 ರಂದು ಅಥವಾ ಅದರ ಒಳಗಾಗಿ ರಾಜಮಹೇಂದ್ರವರಂ ಜೈಲು ವರಿಷ್ಠಾಧಿಕಾರಿ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


