ಉತ್ತರ ಪ್ರದೇಶ: ಹೆದ್ದಾರಿ ಟೋಲ್ ಪ್ಲಾಜಾ ಬಳಿ ಬಿದ್ದಿದ್ದ ಬಾಕ್ಸ್‌ನಲ್ಲಿ ಮಹಿಳೆಯ ಅರ್ಧ ಸುಟ್ಟ ಶವ ಪತ್ತೆ!
ಶನಿವಾರ ಸಂಜೆ ಇಲ್ಲಿ ಟಿನ್ ಬಾಕ್ಸ್‌ನಲ್ಲಿ ಮಹಿಳೆಯೊಬ್ಬರ ಅರ್ಧ ಸುಟ್ಟ ಶವ ಪತ್ತೆಯಾಗಿದೆ. ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಭದೋಹಿ: ಶನಿವಾರ ಸಂಜೆ ಇಲ್ಲಿ ಟಿನ್ ಬಾಕ್ಸ್‌ನಲ್ಲಿ ಮಹಿಳೆಯೊಬ್ಬರ ಅರ್ಧ ಸುಟ್ಟ ಶವ ಪತ್ತೆಯಾಗಿದೆ. ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 19ರ ಲಾಲಾನಗರ ಟೋಲ್ ಪ್ಲಾಜಾ ಬಳಿ ಬಿದ್ದಿದ್ದ ಬಾಕ್ಸ್‌ನಿಂದ ಸುಟ್ಟ ವಾಸನೆ ಬರುತ್ತಿದೆ ಎಂಬ ಮಾಹಿತಿ ಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಅದರೊಳಗೆ ಮಹಿಳೆಯ ಅರ್ಧ ಸುಟ್ಟ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಭದೋಹಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮೀನಾಕ್ಷಿ ಕಾತ್ಯಾಯನ್, ಮಹಿಳೆಯು ಸುಮಾರು 20 ವರ್ಷ ವಯಸ್ಸಿನವರಾಗಿದ್ದು, ಬಿಳಿ ಸೂಟ್ ಧರಿಸಿದ್ದರು ಎಂದು ತಿಳಿಸಿದರು.
ಕೊಲೆಗೂ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಂಭವವಿದ್ದು, ಆಕೆಯ ಗುರುತು ಪತ್ತೆಯಾಗದಂತೆ ಮುಖದಿಂದ ಸೊಂಟದವರೆಗೆ ಪೆಟ್ರೋಲ್ ಹಾಕಿ ಸುಟ್ಟು ಹಾಕಿರುವ ಸಾಧ್ಯತೆ ಇದೆ ಎಂದು ಹೇಳಿದರು.
ಮಹಿಳೆಯ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದೆ. ಫೋರೆನ್ಸಿಕ್ ತಂಡ ಮತ್ತು ಶ್ವಾನದಳ ಸ್ಥಳಕ್ಕೆ ಧಾವಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಮಹಿಳೆಯನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕಾತ್ಯಾಯನ್ ಹೇಳಿದರು.
ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಸಾಧ್ಯವಿರುವ ಎಲ್ಲಾ ದೃಷ್ಟಿಕೋನಗಳಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


