ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಕಾಂಗ್ರೆಸ್ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ - ಕೆಸಿ ವೇಣುಗೋಪಾಲ್
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರು, ತಮ್ಮ ಪಕ್ಷ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ...

ನವದೆಹಲಿ: ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರು, ತಮ್ಮ ಪಕ್ಷ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಇತರರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ ಎಂದು ಸೋಮವಾರ ಹೇಳಿದ್ದಾರೆ.
ಉದಯನಿಧಿ ಹೇಳಿಕೆಗೆ ಬಗ್ಗೆ ಕಾಂಗ್ರೆಸ್ ನಾಯಕರ ಮೌನವನ್ನು ಬಿಜೆಪಿ ಪ್ರಶ್ನಿಸಿತ್ತು. ವಿರೋಧ ಪಕ್ಷವು ಹಿಂದೂ ಧರ್ಮದ ವಿರುದ್ಧವಾಗಿದೆ ಎಂದು ಆರೋಪಿಸುತ್ತಿದ್ದಂತೆ ಕಾಂಗ್ರೆಸ್ ಈ ಪ್ರತಿಕ್ರಿಯೆ ನೀಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದ್ದರೂ ಉಳಿದೆಲ್ಲ ರಾಜಕೀಯ ಪಕ್ಷಗಳಿಗೆ ತನ್ನದೇ ಆದ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆ
"ವಾಸ್ತವವಾಗಿ, ನಮ್ಮ ದೃಷ್ಟಿಕೋನವು ತುಂಬಾ ಸ್ಪಷ್ಟವಾಗಿದೆ - 'ಸರ್ವಧರ್ಮ ಸಂಭವ' (ಎಲ್ಲಾ ಧರ್ಮಗಳಿಗೆ ಸಮಾನ ಗೌರವ) ಕಾಂಗ್ರೆಸ್ ಸಿದ್ಧಾಂತವಾಗಿದೆ. ಆದರೆ, ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಿಪಡಿಸಲು ಸ್ವಾತಂತ್ರ್ಯವಿದೆ ಎಂದು ನೀವು ಅರ್ಥಮಾಡಿಕೊಳ್ಳಬೇಕು". ನಾವು ಪ್ರತಿಯೊಬ್ಬರ ನಂಬಿಕೆಗಳನ್ನು ಗೌರವಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


