ರಾಷ್ಟ್ರಪತಿಗಳ ಜಿ20 ಔತಣಕೂಟದಲ್ಲಿ ಮಮತಾ ಬ್ಯಾನರ್ಜಿ ಭಾಗಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಭಾಗವಹಿಸುವುದಕ್ಕಾಗಿ ಶನಿವಾರ ದೆಹಲಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಭಾಗವಹಿಸುವುದಕ್ಕಾಗಿ ಶನಿವಾರ ದೆಹಲಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಹ್ವಾನದ ಮೇರೆಗೆ ಮಮತಾ ಬ್ಯಾನರ್ಜಿ ಅವರು ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ 'ಭಾರತ್ ರಾಷ್ಟ್ರಪತಿ' ಎಂದು ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬ್ಯಾನರ್ಜಿ, ಇಂಡಿಯಾ ಅಂದರೆ ಭಾರತ ಎಂಬುದು ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
"ಭಾರತದ ಹೆಸರನ್ನು ಬದಲಾಯಿಸಲಾಗುತ್ತಿದೆ ಎಂದು ನಾನು ಕೇಳಿದೆ. ಗೌರವಾನ್ವಿತ ರಾಷ್ಟ್ರಪತಿಗಳ ಹೆಸರಿನಜಿ 20 ಆಹ್ವಾನ ಪತ್ರಿಕೆಯಲ್ಲಿ ಭಾರತ್ ರಾಷ್ಟ್ರಪತಿ ಎಂದು ಬರೆಯಲಾಗಿದೆ. ಇಂಗ್ಲಿಷ್‌ನಲ್ಲಿ ನಾವು ಇಂಡಿಯಾ ಎಂದು ಹೇಳುತ್ತೇವೆ. ಹಿಂದಿಯಲ್ಲಿ ನಾವು 'ಭಾರತ್ ಮತ್ತು ಭಾರತ್ ಕಾ ಸಂವಿಧನ್' ಎಂದು ಹೇಳುತ್ತೇವೆ. ನಾವೆಲ್ಲರೂ ಭಾರತ್ ಎಂದು ಹೇಳುತ್ತೇವೆ, ಇದರಲ್ಲಿ ಹೊಸದೇನಿದೆ? ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


