ದೇಶ

ಆಂಧ್ರ: ತಿರುಪತಿಗೆ ತೆರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ: ಐವರು ಸಾವು, 11 ಮಂದಿಗೆ ಗಾಯ

ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ...

ಆಂಧ್ರ: ತಿರುಪತಿಗೆ ತೆರಳುತ್ತಿದ್ದ ಕ್ರೂಸರ್ ಲಾರಿಗೆ ಡಿಕ್ಕಿ: ಐವರು ಸಾವು, 11 ಮಂದಿಗೆ ಗಾಯ
ಅಪಘಾತಕ್ಕೀಡಾದ ಲಾರಿ ಮತ್ತು ಕ್ರೂಸರ್
Published On :

ಅನ್ನಮಯ: ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್  ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರಿದ್ದಾರೆ ಎಂದು ಹೇಳಿದ್ದಾರೆ.

"ಅಪಘಾತದಲ್ಲಿ ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಮೆಥಂಪಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗಬಾಬು ಎಎನ್‌ಐಗೆ ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಅವರು ಹೇಳಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.