ದೇಶ

ಹೊಸ ಸಂಸತ್ ಭವನದಲ್ಲಿ ಮಂಗಳವಾರ ಅಧಿವೇಶನ ಆರಂಭ: ಪ್ರಹ್ಲಾದ್ ಜೋಷಿ

ನಾಳೆಯಿಂದ ಐದು ದಿನ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನದ ಅಧಿವೇಶನ ಹಳೆಯ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದೆ. ಸೆಪ್ಟೆಂಬರ್ 19 ರಂದು ಹೊಸ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

ಹೊಸ ಸಂಸತ್ ಭವನದಲ್ಲಿ ಮಂಗಳವಾರ ಅಧಿವೇಶನ ಆರಂಭ: ಪ್ರಹ್ಲಾದ್ ಜೋಷಿ
ಪ್ರಹ್ಲಾದ್ ಜೋಷಿ
Published On :

ನವದೆಹಲಿ: ನಾಳೆಯಿಂದ ಐದು ದಿನ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನದ ಅಧಿವೇಶನ ಹಳೆಯ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದೆ. ಸೆಪ್ಟೆಂಬರ್ 19 ರಂದು ಹೊಸ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

ಸರ್ವ ಪಕ್ಷ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 20 ರಿಂದ ನೂತನ ಸಂಸತ್ ಭವನದಲ್ಲಿ ನಿಯಮಿತ ಸರ್ಕಾರಿ ಕೆಲಸಗಳು ಆರಂಭವಾಗಲಿವೆ ಎಂದರು.

ಸಂಸತ್ ವಿಶೇಷ ಅಧಿವೇಶನದ ಮೊದಲ ದಿನದ ಅಧಿವೇಶನ ನಾಳೆ ಹಳೆಯ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದೆ. ಸೆಪ್ಟೆಂಬರ್ 19 ರಂದು ಹಳೆಯ ಸಂಸತ್ ಕಟ್ಟಡದಲ್ಲಿ ಫೋಟೋ ಸೆಷನ್ಸ್ ಇರಲಿದೆ. ನಂತರ ಅಂದು ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ಕಾರ್ಯಕ್ರಮವಿರಲಿದೆ. ಬಳಿಕ ನಾವು ಹೊಸ ಸಂಸತ್ ಕಟ್ಟಡ ಪ್ರವೇಶಿಸುವುದಾಗಿ ಪ್ರಹ್ಲಾದ್ ಜೋಷಿ ವಿವರಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.