ಕೇಜ್ರಿವಾಲ್ ಸಿಎಂ ಆಗಿ ಮುಂದುವರಿಯಬೇಕು: ಪತ್ನಿ ಸುನೀತಾಗೆ ಆಪ್ ಶಾಸಕರ ಆಗ್ರಹ
ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬಾರದು ಮತ್ತು ಜೈಲಿನಿಂದಲೇ ಸರ್ಕಾರ ನಡೆಸಬೇಕು ಎಂದು ಎಎಪಿ ಶಾಸಕರು ಪ್ರತಿಪಾದಿಸಿದರು.

ನವದೆಹಲಿ: ಎಎಪಿ ಶಾಸಕರು ಮಂಗಳವಾರ ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ, ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬಾರದು ಮತ್ತು ಜೈಲಿನಿಂದಲೇ ಸರ್ಕಾರ ನಡೆಸಬೇಕು ಎಂದು ಪ್ರತಿಪಾದಿಸಿದರು.
ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇಂದು ನಡೆದ ಸಭೆಯಲ್ಲಿ ಎಎಪಿ ಶಾಸಕರು, ದೆಹಲಿಯ ಎರಡು ಕೋಟಿ ಜನ ಮುಖ್ಯಮಂತ್ರಿಯೊಂದಿಗೆ ನಿಂತಿದ್ದಾರೆ ಮತ್ತು ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಪಕ್ಷದ ಮುಖಂಡರು ಸುನೀತಾ ಕೇಜ್ರಿವಾಲ್ ಅವರಿಗೆ ಹೇಳಿದರು.
ದೆಹಲಿಯಲ್ಲಿರುವ ಎಎಪಿಯ 62 ಶಾಸಕರ ಪೈಕಿ 55 ಶಾಸಕರು ಸಭೆಯಲ್ಲಿ ಹಾಜರಿದ್ದರು.
ನಾಲ್ವರು ಶಾಸಕರು ದೆಹಲಿಯಿಂದ ಹೊರಗಿದ್ದು, ಮೂವರು - ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾರೆ ಎಂದು ಎಎಪಿ ನಾಯಕರು ಹೇಳಿದ್ದಾರೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



