ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಮೂವರು ಉಗ್ರರ ಸಹಚರರ ಬಂಧನ
ಭದ್ರತಾ ಪಡೆಗಳು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಮೂವರು ಉಗ್ರರ ಸಹಚರರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ಸಹಚರರ ವಶದಿಂದ ಪಿಸ್ತೂಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಬಾರಮುಲ್ಲಾ: ಭದ್ರತಾ ಪಡೆಗಳು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಮೂವರು ಉಗ್ರರ ಸಹಚರರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ಸಹಚರರ ವಶದಿಂದ ಪಿಸ್ತೂಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಜಂಟಿ ಚೆಕ್ ಪಾಯಿಂಟ್ ಸ್ಥಾಪಿಸಿದ್ದ ಭದ್ರತಾ ಪಡೆಗಳು, ಮೂವರು ಅನುಮಾನಾಸ್ಪದ ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ್ದು, ನಂತರ ಎಚ್ಚೆತ್ತುಕೊಂಡಿದ್ದು, ಸಾಕಷ್ಟು ಜಾಣ್ಮೆಯಿಂದ ಅವರನ್ನು ಬಂಧಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ಫೈಸಲ್ ಅಹ್ಮದ್ ಕಚ್ರೂ, ಅಕಿಬ್ ಮೆಹರಾಜ್ ಕಾನಾ ಮತ್ತು ಆದಿಲ್ ಅಕ್ಬರ್ ಗೋಜ್ರೆ ಎಂದು ಗುರುತಿಸಲಾಗಿದೆ. ಶೋಧದ ಸಮಯದಲ್ಲಅವರ ವಶದಿಂದ ಪಿಸ್ತೂಲ್, ಮೊಬೈಲ್ ಫೋನ್ ಗಳು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ. ಮೂವರ ವಿರುದ್ಧ ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



