ಲೋಕಸಭೆ ಚುನಾವಣೆ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್
ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಹಾಗೂ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಅವರು ಬುಧವಾರ ಬಿಜೆಪಿ ಸೇರಿದ್ದಾರೆ.

ನವದೆಹಲಿ: ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಹಾಗೂ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಅವರು ಬುಧವಾರ ಬಿಜೆಪಿ ಸೇರಿದ್ದಾರೆ.
ವಿಜೇಂದರ್ ಸಿಂಗ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ಮಥುರಾ ಕ್ಷೇತ್ರದಿಂದ ನಟಿ ಮತ್ತು ಹಾಲಿ ಸಂಸದೆ ಹೇಮಾ ಮಾಲಿನಿ ವಿರುದ್ಧ 38ರ ಹರೆಯದ ವಿಜೇಂದರ್ ಸಿಂಗ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಯೋಜಿಸಿತ್ತು. ಆದರೆ ವಿಜೇಂದರ್ ಸಿಂಗ್ ಅವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
ಜಾಟ್ ಸಮುದಾಯದ ವಿಜೇಂದರ್ ಸಿಂಗ್ ಅವರು ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ವಿಜೇಂದರ್ ಸಿಂಗ್ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದಿದ್ದರು. ಬಳಿಕ 2009ರ ವಿಶ್ವ ಚಾಂಪಿಯನ್ ಶಿಪ್ ಮತ್ತು 2010ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



