ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.
ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದರು.
ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸುವ ಮುನ್ನ ಇಲ್ಲಿನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್ ವರೆಗೆ ರೋಡ್ ಶೋ ನಡೆಸಿದರು.
ರೋಡ್‌ಶೋ ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ, ರಾಜ್ಯದ ಹೈರೇಂಜ್ ಜಿಲ್ಲೆಯಲ್ಲಿ ಅನೇಕ ಜೀವಗಳನ್ನು ಬಲಿತೆಗೆದುಕೊಂಡಿರುವ ಮಾನವ-ಪ್ರಾಣಿ ಸಂಘರ್ಷ ಸೇರಿದಂತೆ ಎಲ್ಲಾ ವಿಷಯಗಳಲ್ಲೂ ತಾವು ವಯನಾಡಿನ ಜನರೊಂದಿಗೆ ಇರುವುದಾಗಿ ಹೇಳಿದರು.
ವಯನಾಡ್ ನನ್ನ ಮನೆ ಇದ್ದಂತೆ, ಇಲ್ಲಿನ ಜನರೇ ನನ್ನ ಕುಟುಂಬ. ವಯನಾಡ್ ಜನತೆಯ ಅಚಲ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ನಾವು 'ನ್ಯಾಯ್' ನ ಹೊಸ ಯುಗಕ್ಕೆ ಕಾಲಿಡುತ್ತಿರುವಾಗ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸುವ ನನ್ನ ಸಮರ್ಪಣೆಯನ್ನು ಪುನರುಚ್ಚರಿಸಲು ಬಯಸುತ್ತೇನೆ" ಎಂದು ರಾಹುಲ್ ಗಾಂಧಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



