ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ; ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಶೀಲ್ ಕುಮಾರ್ ಮೋದಿ
ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಹೇಳಿದ್ದಾರೆ

ನವದೆಹಲಿ: ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಹೇಳಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಬರೆದುಕೊಂಡಿರುವ ಮಾಡಿದ್ದಾರೆ. ಜನರಿಗೆ ಹೇಳುವ ಸಮಯ ಬಂದಿದೆ ತನ್ನ ಆರೋಗ್ಯದ ಬಗ್ಗೆ ಜನರ ಮುಂದೆ ಹೇಳುತ್ತಿದ್ದೇನೆ ಎಂದು 72 ವರ್ಷದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಹೇಳಿದ್ದಾರೆ. ದೇಶ, ಬಿಹಾರ ಮತ್ತು ಪಕ್ಷಕ್ಕೆ ಸದಾ ಕೃತಜ್ಞರಾಗಿರುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಸುಶೀಲ್ ಮೋದಿ ಅವರ ಈ ಹೇಳಿಕೆಗೆ ಬಿಜೆಪಿ ನಾಯಕ ಮತ್ತು ಪಕ್ಷದ ಸಂಸದ ರವಿಶಂಕರ್ ಪ್ರಸಾದ್ ಪ್ರತಿಕ್ರಿಯಿಸಿದ್ದ, ಇದರಿಂದ ನನಗೆ ತೀವ್ರ ನೋವುಂಟಾಗಿದೆ ಎಂದು ಹೇಳಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ಸುಶೀಲ್ ಮೋದಿ ಜುಲೈ 2017 ರಿಂದ ನವೆಂಬರ್ 2020 ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷ ಮತ್ತು ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದಗಳು ತಿಳಿಸುವೇ, ರಾಜ್ಯಸಭೆಗೆ ಅವಕಾಶ ನೀಡಿದ ಬಿಜೆಪಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಸುಶೀಲ್ ಮೋದಿ ಅವರು ಕೂಡ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



