ಶಸ್ತ್ರಾಸ್ತ್ರ ಪ್ರಕರಣ: ಮಧ್ಯ ಪ್ರದೇಶ ಕೋರ್ಟ್ ನಿಂದ ಲಾಲು ವಿರುದ್ಧ ಶಾಶ್ವತ ಬಂಧನ ವಾರಂಟ್
ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (75) ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯ ಶುಕ್ರವಾರ ಶಾಶ್ವತ ಬಂಧನ ವಾರಂಟ್ ಹೊರಡಿಸಿದೆ.

ಗ್ವಾಲಿಯರ್: 1995 ರಿಂದ 97ರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಖರೀದಿಸಿದ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (75) ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯ ಶುಕ್ರವಾರ ಶಾಶ್ವತ ಬಂಧನ ವಾರಂಟ್ ಹೊರಡಿಸಿದೆ.
ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮಹೇಂದ್ರ ಸೈನಿ ಅವರು ಲಾಲು ಯಾದವ್ ವಿರುದ್ಧ ಶಾಶ್ವತ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಅಭಿಷೇಕ್ ಮೆಹ್ರೋತ್ರಾ ಹೇಳಿದ್ದಾರೆ.
1995-97ರ ಪ್ರಕರಣವು ನಕಲಿ ದಾಖಲೆಗಳನ್ನು ಬಳಸಿ ಅಧಿಕೃತ ಡೀಲರ್‌ನಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿದೆ. ಪ್ರಕರಣದಲ್ಲಿ 23 ಆರೋಪಿಗಳಿದ್ದು, ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಎಲ್ಲರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ಪೈಕಿ ಲಾಲು ಪ್ರಸಾದ್ ಯಾದವ್ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಲಾಗಿದೆ" ಎಂದು ಅವರು ಹೇಳಿದರು.
ಪ್ರಾಸಿಕ್ಯೂಷನ್ ಪ್ರಕಾರ, ಆರ್‌ಜೆಡಿ ನಾಯಕನ ಪರವಾಗಿ ಯಾರೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಶಾಶ್ವತ ಬಂಧನ ವಾರಂಟ್ ಹೊರಡಿಸಲಾಗಿದೆ.
ಜಾಮೀನು, ಬಂಧನ ಅಥವಾ ಜಾಮೀನು ರಹಿತ ಬಂಧನ ವಾರಂಟ್‌ಗಳನ್ನು ಹೊರಡಿಸಿದ ನಂತರವೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಶಾಶ್ವತ ಬಂಧನ ವಾರಂಟ್ ನೀಡಲಾಗುತ್ತದೆ ಎಂದು ಜಬಲ್‌ಪುರ ಮೂಲದ ಹೈಕೋರ್ಟ್ ವಕೀಲ ರಾಕೇಶ್ ಪಾಂಡೆ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



