ದೇಶ

‌ಎಲ್ಗಾರ್‌ ಪರಿಷತ್ ಪ್ರಕರಣ: ಕಾರ್ಯಕರ್ತೆ ಶೋಮಾ ಸೇನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

ಎಲ್ಗಾರ್ ಪರಿಷತ್‌– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಶೋಮಾ ಕಾಂತಿ ಸೇನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6 ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೇನ್ ಅವರನ್ನು ಬಂಧಿಸಲಾಯಿತು.

‌ಎಲ್ಗಾರ್‌ ಪರಿಷತ್ ಪ್ರಕರಣ: ಕಾರ್ಯಕರ್ತೆ ಶೋಮಾ ಸೇನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ಶೋಮಾ ಸೇನ್‌
Published On :

ನವದೆಹಲಿ: ಎಲ್ಗಾರ್ ಪರಿಷತ್‌– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿದ್ದ ಶೋಮಾ ಕಾಂತಿ ಸೇನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜೂನ್ 6 ರಂದು ಇಂಗ್ಲಿಷ್ ಸಾಹಿತ್ಯ ಪ್ರಾಧ್ಯಾಪಕಿ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಸೇನ್ ಅವರನ್ನು ಬಂಧಿಸಲಾಯಿತು.

ಆದೇಶವನ್ನು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠವು, ವಿಶೇಷ ನ್ಯಾಯಾಲಯದ ಅನುಮತಿಯಿಲ್ಲದೆ ಸೇನ್ ಮಹಾರಾಷ್ಟ್ರವನ್ನು ತೊರೆಯುವಂತಿಲ್ಲ ಸೇರಿದಂತೆ ಇತರ ಷರತ್ತುಗಳೊಂದಿಗೆ ಜಾಮೀನು ನೀಡಿದ್ದಾರೆ.

ಜಾಮೀನು ಅವಧಿಯಲ್ಲಿ ಸೇನ್ ತಾವು ವಾಸವಾಗಿರುವ ವಿಳಾಸದ ಬಗ್ಗೆ ಎನ್‌ಐಎ ತನಿಖಾಧಿಕಾರಿಗೆ ತಿಳಿಸಬೇಕು. ಸೇನ್ ತನ್ನ ಮೊಬೈಲ್ ಫೋನ್‌ನ ಜಿಪಿಎಸ್ ಅನ್ನು ದಿನದ 24 ಗಂಟೆಯೂ ಸಕ್ರಿಯವಾಗಿರಿಸಿಕೊಳ್ಳಬೇಕು ಎಂದು ಪೀಠ ಹೇಳಿದೆ.

ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಇದು ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂಸಾಚಾರದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವು ಗಾಯಗೊಂಡಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿರುವ ಈ ಪ್ರಕರಣವನ್ನು ಪುಣೆ ಪೊಲೀಸರು ತನಿಖೆ ನಡೆಸಿದ್ದರು. ಈ ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿದೆ ಎಂದು ಪುಣೆ ಪೊಲೀಸರು ಹೇಳಿದ್ದರು.

ಹತ್ತಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.