ಬಂಗಾಳ: ಸ್ಫೋಟಕ್ಕೆ ಸಂಬಂಧಿಸಿದಂತೆ ಟಿಎಂಸಿ ಕಾರ್ಯಕರ್ತರ ಬಂಧನದ ನಂತರ NIA ಅಧಿಕಾರಿಗಳ ಮೇಲೆ ದಾಳಿ, ಇಬ್ಬರಿಗೆ ಗಾಯ
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಬಂಧಿಸಿದ ನಂತರ ಅವರ ಮೇಲೆ ದಾಳಿ ನಡೆಸಲಾಗಿದೆ.

ಕೋಲ್ಕತ್ತಾ: 2022 ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಶನಿವಾರ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಬಂಧಿಸಿದ ನಂತರ ಅವರ ಮೇಲೆ ದಾಳಿ ನಡೆಸಲಾಗಿದೆ.
ಘಟನೆಯಲ್ಲಿ ಇಬ್ಬರು ಎನ್‌ಐಎ ಅಧಿಕಾರಿಗಳಿಗೆ ಗಾಯಗಳಾಗಿದ್ದು, ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಮತ್ತು ಅವರ ವಾಹನವನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ.
ಎನ್‌ಐಎ ಮತ್ತು ಇತರ ಏಜೆನ್ಸಿಗಳ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಧ್ಯರಾತ್ರಿ ಮತ್ತು ಚುನಾವಣೆಗೆ ಮುನ್ನ ದಾಳಿಗಳನ್ನು ಏಕೆ ನಡೆಸಲಾಯಿತು ಎಂದು ಪ್ರಶ್ನಿಸಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಅವರ ಮನೆ ಮೇಲೆ ಜನವರಿ 5 ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಲು ಹೋದಾಗ ರಾಜ್ಯವನ್ನೇ ಬೆಚ್ಚಿಬೀಳಿಸುವ ರೀತಿಯ ಘಟನೆ ನಡೆಯಿತು. ಘಟನೆಯಲ್ಲಿ ಐವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದರು.
ಡಿಸೆಂಬರ್ 3, 2022 ರಂದು ಭೂಪತಿನಗರದಲ್ಲಿ ಮನೆಯೊಂದರಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಭೂಪತಿನಗರದ ಇಬ್ಬರು ನಿವಾಸಿಗಳಾದ ಬಲೈ ಮೈತಿ ಮತ್ತು ಮನೋಬ್ರತ ಜಾನಾಗೆ ಸಮನ್ಸ್ ನೀಡಿತ್ತು. ಅವರು ವಿಚಾರಣೆಗೆ ಹಾಜರಾಗದ ಕಾರಣ, ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
ಎನ್‌ಐಎ ಅಧಿಕಾರಿಗಳು ಜಾನಾ ಮತ್ತು ಮೈತಿಯೊಂದಿಗೆ ವಾಪಸಾಗುತ್ತಿದ್ದಾಗ ಏಕಾಏಕಿ ಅವರ ಮೇಲೆ ದಾಳಿ ನಡೆಸಲಾಯಿತು.
ಏತನ್ಮಧ್ಯೆ, ಬ್ಯಾನರ್ಜಿ ಏಜೆನ್ಸಿ ವಿರುದ್ಧ ವಾಗ್ದಾಳಿ ನಡೆಸಿದರು, "ಎನ್ಐಎಗೆ ಯಾವ ಹಕ್ಕಿದೆ? ಅವರು ಬಿಜೆಪಿಯನ್ನು ಬೆಂಬಲಿಸಲು ಇದೆಲ್ಲವನ್ನೂ ಮಾಡುತ್ತಿದ್ದಾರೆ. ಬಿಜೆಪಿಯ ಕೊಳಕು ರಾಜಕೀಯದ ವಿರುದ್ಧ ಹೋರಾಡಲು ನಾವು ಇಡೀ ಜಗತ್ತಿಗೆ ಕರೆ ನೀಡುತ್ತೇವೆ" ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



