ತೆಲಂಗಾಣ-ಛತ್ತೀಸ್ ಗಢ ಗಡಿಭಾಗದಲ್ಲಿ ಎನ್ ಕೌಂಟರ್: ಮೂವರು ನಕ್ಸಲೀಯರ ಹತ್ಯೆ
ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಛತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಯ್‌ಪುರ: ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಛತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತೆಲಂಗಾಣದ ನಕ್ಸಲ್ ವಿರೋಧಿ ಪಡೆ ಗ್ರೇಹೌಂಡ್ಸ್ ತಂಡವು ಕಾರ್ಯಾಚರಣೆಯಲ್ಲಿದ್ದಾಗ ಅಂತಾರಾಜ್ಯ ಗಡಿಯಲ್ಲಿರುವ ಪೂಜಾರಿ ಕಂಕೇರ್ ಅರಣ್ಯದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅವರು ಹೇಳಿದರು.
ಗ್ರೇಹೌಂಡ್ಸ್ ತಂಡಕ್ಕೆ ಬೆಂಬಲ ನೀಡಲು ಛತ್ತೀಸ್‌ಗಢ ಪೊಲೀಸರ ತಂಡವೂ ಸ್ಥಳದಲ್ಲಿದೆ ಎಂದು ಅವರು ಹೇಳಿದರು.
ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರು ಮೃತಪಟ್ಟಿದ್ದು, ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ವಾರದ ಆರಂಭದಲ್ಲಿ, ಛತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ 13 ನಕ್ಸಲೀಯರು ಹತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



