ಪ್ರತಿಕೂಲ ಹವಾಮಾನ: ಟೇಕಾಫ್ ಆಗದ ರಾಹುಲ್ ಗಾಂಧಿ ಹೆಲಿಕಾಪ್ಟರ್, ಮಧ್ಯ ಪ್ರದೇಶದಲ್ಲೇ ರಾತ್ರಿ ವಾಸ್ತವ್ಯ
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಅವರು ಸೋಮವಾರ ರಾತ್ರಿ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತಂಗಲಿದ್ದಾರೆ.

ಶಹದೋಲ್: ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಅವರು ಸೋಮವಾರ ರಾತ್ರಿ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತಂಗಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರು ಇಂದು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮಧ್ಯ ಪ್ರದೇಶಕ್ಕೆ ತೆರಳಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿರುವ ಮಂಡ್ಲಾ ಮತ್ತು ಶಹದೋಲ್ನಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.
"ಶಹದೋಲ್ನಲ್ಲಿ ಕೆಟ್ಟ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ಟೇಕಾಫ್ ಆಗಲಿಲ್ಲ. ರಾಹುಲ್ ಗಾಂಧಿ ಅವರು ಜಬಲ್ಪುರಕ್ಕೆ ತೆರಳಬೇಕಿತ್ತು ಮತ್ತು ಅಲ್ಲಿಂದ ದೆಹಲಿಗೆ ತೆರಳಬೇಕಿತ್ತು" ಎಂದು ಮಧ್ಯ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ಅವರು ಪಿಟಿಐಗೆ ತಿಳಿಸಿದ್ದಾರೆ.
"ಈಗ, ಅವರು ರಾತ್ರಿ ಶಹದೋಲ್ನಲ್ಲಿರುವ ಹೋಟೆಲ್ನಲ್ಲಿ ತಂಗುತ್ತಾರೆ ಮತ್ತು ಮಂಗಳವಾರ ಬೆಳಗ್ಗೆ 6 ಗಂಟೆಗೆ ಹೊರಡುತ್ತಾರೆ" ಎಂದು ಪಟ್ವಾರಿ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



