ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ಗೆ ಬರಬೇಕಾ?: ಕರ್ನಾಟಕ ಬರ ಪರಿಹಾರ ವಿಷಯವಾಗಿ ಕೇಂದ್ರಕ್ಕೆ ಚಾಟಿ!
ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ನವದೆಹಲಿ: ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಕರ್ನಾಟಕ ಸರ್ಕಾರ ಬರ ಪರಿಹಾರ ಕೊಡಿಸುವಂತೆ ಕೇಂದ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಈ ರೀತಿ ಪ್ರಶ್ನಿಸಿದೆ.
ಕೇಂದ್ರ ಹಾಗೂ ರಾಜ್ಯಗಳ ನಡುವೆ ವಾದಗಳಾಗುವುದು ಬೇಡ ಎಂದೂ ಸುಪ್ರೀಂ ಕೋರ್ಟ್ ಇದೇ ವೇಳೆ ಅಭಿಪ್ರಾಯಪಟ್ಟಿದೆ. ಬರ ನಿರ್ವಹಣೆಗಾಗಿ ಎನ್ ಡಿಆರ್ ಎಫ್ ನಿಂದ ಪರಿಹಾರ ಬಿಡುಗಡೆ ಮಾಡುವುದಕ್ಕೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ನ್ಯಾ. ಬಿಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರ ಪೀಠ ಈ ವಿಚಾರಣೆ ನಡೆಸಿದ್ದು, ರಾಜ್ಯಗಳು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಕದತಟ್ಟಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಪ್ರಶ್ನಿಸಿದೆ. ಇದೇ ವೇಳೆ ಕೇಂದ್ರಕ್ಕೆ ಈ ವಿಷಯವಾಗಿ ನೊಟೀಸ್ ಜಾರಿಗೊಳಿಸುವುದಾಗಿ ಕೋರ್ಟ್ ಮೌಖಿಕವಾಗಿ ಹೇಳಿತು. ಆದರೆ, ಕೇಂದ್ರ ಸರ್ಕಾರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಹಾಗೂ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನೊಟೀಸ್ ನೀಡದಂತೆ ಮನವಿ ಮಾಡಿದ್ದು, ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು 2 ವಾರಗಳಲ್ಲಿ ಈ ವಿಷಯವಾಗಿ ಸುಪ್ರೀಂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸುವುದಾಗಿ ಭರವಸೆ ನೀಡಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ, ಮೆಹ್ತಾ ಅವರು ಕರ್ನಾಟಕ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಬದಲು, ಯಾರಾದರೂ ಈ ಸಮಸ್ಯೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ್ದರೆ, ಸಮಸ್ಯೆಯನ್ನು ಪರಿಹರಿಸಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಎನ್‌ಡಿಆರ್‌ಎಫ್‌ನ ಪ್ರಕಾರ ಬರಗಾಲದ ವ್ಯವಸ್ಥೆಗೆ ಹಣಕಾಸು ನೆರವು ಬಿಡುಗಡೆ ಮಾಡದಿರುವ ಕೇಂದ್ರದ ಕ್ರಮವು ಸಂವಿಧಾನದ 14 ಮತ್ತು 21 ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿದ ರಾಜ್ಯದ ಜನರ ಮೂಲಭೂತ ಹಕ್ಕುಗಳ "ಉಲ್ಲಂಘನೆ" ಎಂದು ಘೋಷಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




