ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 23ರವರೆಗೆ ಮಂಗಳವಾರ ವಿಸ್ತರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 23ರವರೆಗೆ ಮಂಗಳವಾರ ವಿಸ್ತರಿಸಿದೆ.
ಈ ಹಿಂದೆ ನೀಡಲಾಗಿದ್ದ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕವಿತಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು.
ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳುಮಾಡುವ ಪ್ರಯತ್ನಗಳನ್ನು ಉಲ್ಲೇಖಿಸಿ, ಇ.ಡಿ ಕವಿತಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿದೆ.
ನ್ಯಾಯಾಲಯದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕವಿತಾ, ಇದು ಸಂಪೂರ್ಣ ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಮಾಡಿರುವ ಪ್ರಕರಣ ಇದಾಗಿದೆ. ಸಿಬಿಐ ಈಗಾಗಲೇ ನನ್ನ ಹೇಳಿಕೆಯನ್ನು ಜೈಲಿನಲ್ಲಿ ದಾಖಲಿಸಿಕೊಂಡಿದೆ ಎಂದರು.
ಸೋಮವಾರ ಅದೇ ನ್ಯಾಯಾಲಯ ಆಕೆಗೆ ಮಧ್ಯಂತರ ಜಾಮೀನು ನಿರಾಕರಿಸಿತ್ತು. ಮಗನ ಪರೀಕ್ಷೆಯ ಹಿನ್ನೆಲೆಯಲ್ಲಿ ತಾಯಿಯಾಗಿ ಆತನೊಂದಿಗೆ ಇರಬೇಕು ಎಂದು ಕವಿತಾ ಜಾಮೀನು ಕೋರಿದ್ದರು.
ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ಬೆಂಬಲಿಗರ ಪ್ರತಿಭಟನೆಯ ನಡುವೆ 46 ವರ್ಷದ ಕವಿತಾ ಅವರನ್ನು ಮಾರ್ಚ್ 15ರಂದು ಅವರ ಬಂಜಾರಾ ಹಿಲ್ಸ್ ನಿವಾಸದಿಂದ ಇಡಿ ಅಧಿಕಾರಿಗಳು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



