ರಾಜೀವ್ ಚಂದ್ರಶೇಖರ್ ಅಫಿಡವಿಟ್ ವಿವರಗಳನ್ನು ಪರಿಶೀಲಿಸಲು ಸಿಬಿಡಿಟಿಗೆ ಚುನಾವಣಾ ಆಯೋಗ ಸೂಚನೆ
ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿಗೆ (ಸಿಬಿಡಿಟಿ) ಚುನಾವಣಾ ಆಯೋಗ ಮಂಗಳವಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿಗೆ (ಸಿಬಿಡಿಟಿ) ಚುನಾವಣಾ ಆಯೋಗ ಮಂಗಳವಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಕಣದಲ್ಲಿರುವ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿಯ ಬಗ್ಗೆ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಕಾರ್ಯವಿಧಾನದ ಪ್ರಕಾರ, ಚಂದ್ರಶೇಖರ್ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಲ್ಲಿಸಿರುವ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಲು ಸಿಬಿಡಿಟಿಗೆ ಚುನಾವಣಾ ಆಯೋಗ ನಿರ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ಅಫಿಡವಿಟ್‌ನಲ್ಲಿನ ಮಾಹಿತಿಗಳು ಸರಿಯಿಲ್ಲದಿದ್ದರೆ ಮತ್ತು ತಪ್ಪು ಮಾಡಿದ್ದರೆ, 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125ಎ ಅಡಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಕಾನೂನಿನ ಪ್ರಕಾರ, ನಾಮಪತ್ರಗಳಲ್ಲಿ ಅಥವಾ ಅಫಿಡವಿಟ್‌ನಲ್ಲಿ ಯಾವುದೇ ಮಾಹಿತಿಯನ್ನು ಮರೆಮಾಚುವುದು ಆರು ತಿಂಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಮಾಡಿಕೊಡುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


