ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸಿಗದ ಜಾಮೀನು, ಸುಪ್ರೀಂ ಕೋರ್ಟ್‌ ಮೊರೆ ಹೋದ ದೆಹಲಿ ಸಿಎಂ ಕೇಜ್ರಿವಾಲ್

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸಿಗದ ಜಾಮೀನು, ಸುಪ್ರೀಂ ಕೋರ್ಟ್‌ ಮೊರೆ ಹೋದ ದೆಹಲಿ ಸಿಎಂ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ನ್ಯಾಯಾಲಯ ನಿನ್ನೆ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆದು ಎಎಪಿ ಕಾನೂನು ವಕೀಲ ಸೆಲ್, ಸಂಜೀವ್ ನಾಸಿಯಾರ್ ಅವರು ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್ ತೆರಳಿದ್ದಾರೆ. ಮೇಲ್ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಜ್ರಿವಾಲ್ ಅವರ ಮನವಿಯನ್ನು ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಮುಖ್ಯ ನ್ಯಾಯಮೂರ್ತಿ ಪೀಠದ ಮುಂದೆ ವಿಚಾರಣೆಗಾಗಿ ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ನಾಸಿಯಾರ್ ಹೇಳಿದ್ದಾರೆ.

2021ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಅವರನ್ನು ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ನೀಡಿತ್ತು. ಈ ಅದೇಶದ ವಿರುದ್ಧ ಕೇಜ್ರಿವಾಲ್‌ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.