ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿ ಖಾತೆ ಆರಂಭ
ಲೋಕಸಭೆ ಚುನಾವಣೆಯ (Lok Sabha Elections 2024) ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Elections 2024) ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ.
‘ನಮೋ ಕನ್ನಡ’ ಎಂಬ ಹೆಸರಿನಲ್ಲಿ ನರೇಂದ್ರ ಮೋದಿ ಕನ್ನಡ ಖಾತೆ ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಕನ್ನಡಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ತಲುಪಲು ಮೋದಿಯವರು ಕನ್ನಡದಲ್ಲಿ ಟ್ವಿಟ್ಟರ್ ಖಾತೆ ತೆರೆದಿದ್ದಾರೆ.
ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಪ್ರತ್ಯೇಕ ಟ್ವಿಟ್ಟರ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋಗಳಿಗೆ ಮೋದಿ ಭಾಷಣದ ಕನ್ನಡಾನುವಾದದ ಹಿನ್ನೆಲೆ ಧ್ವನಿ ನೀಡಲಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ಒಂದು ಸುತ್ತಿನ ಚುನಾವಣಾ ಪ್ರಚಾರ ನಡೆಸಿರುವ ಮೋದಿ, ಮತ್ತೊಮ್ಮೆ ಏಪ್ರಿಲ್ 14ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 14ರ ಭಾನುವಾರ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗವಹಿಸಲಿದ್ದು, ನಂತರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


