ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಶುಕ್ರವಾರ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.

ಕೊಲ್ಕತ್ತಾ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಶುಕ್ರವಾರ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.
ಬಂಧಿತ ಆರೋಪಿಗಳಾದ ಮುಸಾವಿರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ರಾಷ್ಟ್ರೀಯ ತನಿಖಾ ಸಂಸ್ಥೆಯ ಮನವಿ ಮೇರೆಗೆ ಸಿಟಿ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ಗೆ ಅನುಮತಿ ನೀಡಿದ್ದಾರೆ. ಕೋರ್ಟ್ ನಿಂದ ವಶಕ್ಕೆ ಪಡೆದು ಆರೋಪಿಗಳನ್ನು ಎನ್‌ಐಎ ತಂಡ ಬೆಂಗಳೂರಿಗೆ ಕರೆತರಲಿದೆ ಎನ್ನಲಾಗಿದೆ.
ಆರೋಪಿಗಳನ್ನು ಕೋಲ್ಕತ್ತಾದಿಂದ 190 ಕಿಮೀ ದೂರದಲ್ಲಿರುವ ಪುರ್ಬಾ ಮೇದಿನಿಪುರ್ ಜಿಲ್ಲೆಯ ಕಡಲತೀರದ ಪ್ರವಾಸಿ ಪಟ್ಟಣ ದಿಘಾದಲ್ಲಿರುವ ಹೋಟೆಲ್‌ನಿಂದ ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ತಾಹಾ ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಆಗಿದ್ದು, ಶಾಜಿಬ್ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



