ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರ ಸಾಲ ಮನ್ನಾ- ರಾಹುಲ್ ಗಾಂಧಿ
ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರ: ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಸಾಕೋಲಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಿರುದ್ಯೋಗ ಮತ್ತು ಹಣದುಬ್ಬರ ದೇಶದ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಗಳಾಗಿವೆ. ಆದರೆ ಇವುಗಳನ್ನು ಪ್ರಧಾನಿ ಮತ್ತು ಸೆಲೆಬ್ರಿಟಿಗಳ ಕಾರ್ಯಕ್ರಮಗಳತ್ತ ಕೇಂದ್ರೀಕರಿಸಿರುವ ಮಾಧ್ಯಮಗಳು ನಿರ್ಲಕ್ಷಿಸಿವೆ ಎಂದು ಕಿಡಿಕಾರಿದರು.
"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ ರಾಹುಲ್ ಗಾಂಧಿ, ನಿರುದ್ಯೋಗ ಮತ್ತು ಹಣದುಬ್ಬರದಿಂದ ಜನರು ಕಂಗಾಲಾಗಿದ್ದಾರೆ. ಕೇವಲ ಸಾವಿರಾರು ರೂ. ಆದಾಯ ಗಳಿಸುವವರು ಮತ್ತು ಕೋಟಿ ಗಳಿಸುವ ಜನರು ಒಂದೇ ಜಿಎಸ್ಟಿ ಪಾವತಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರದಲ್ಲಿನ ಎನ್ ಡಿಎ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
ಭಾರತ್ ಜೋಡೋ ಮತ್ತು ಭಾರತ್ ಜೋಡೋ ನ್ಯಾಯ ಯಾತ್ರೆಗಳ ಸಮಯದಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿಗಳಂತಹ ಸಾಲ ಮನ್ನಾದಂತೆ ಸಾಲ ಮನ್ನಾ ಏಕೆ ಸಿಗುತ್ತಿಲ್ಲ ಅಥವಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಲಾಭ ಹೇಗೆ ಸಿಗುತ್ತಿಲ್ಲ ಎಂದು ರೈತರು ಕೇಳಿದರು. ಎಂಎಸ್ಪಿಗೆ ಕಾನೂನುಬದ್ಧ ಖಾತರಿ ನೀಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸುತ್ತದೆ. ಏಕೆಂದರೆ ಇದು ದೇಶದ ಭವಿಷ್ಯಕ್ಕೆ ಮುಖ್ಯವಾಗಿದೆ. ದೇಶದಲ್ಲಿ ಹಿಂದುಳಿದ ವರ್ಗಗಳ ಶೇಕಡಾವಾರು ಪ್ರಮಾಣ ಯಾರಿಗೂ ತಿಳಿದಿಲ್ಲ. ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳಿಗೆ ಸರ್ಕಾರಿ ಉದ್ಯೋಗಗಳು, ಅಧಿಕಾರಿಶಾಹಿ, ಮಾಧ್ಯಮಗಳು, 200 ಟಾಪ್ ಕಂಪನಿಗಳಲ್ಲಿ ಅವರ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯವಿಲ್ಲ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




