Ayodhya Ram Mandir: ಜನಸಂದಣಿ ನಿರ್ವಹಣೆ ಕುರಿತು TTD ಸಲಹೆ ಪಡೆದ ರಾಮಮಂದಿರ ಟ್ರಸ್ಟ್
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಾದ ಬಳಿಕ ರಾಮಲಲ್ಲಾ ದರ್ಶನಕ್ಕೆ ಜನ ಮುಗಿ ಬೀಳುತ್ತಿದ್ದು, ಜನಸಾಗರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಿರುಪತಿ ತಿರುಮಲ ದೇವಸ್ಥಾನಂ (TTD) ತನ್ನ ವರದಿ ನೀಡಿದೆ.

ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಾದ ಬಳಿಕ ರಾಮಲಲ್ಲಾ ದರ್ಶನಕ್ಕೆ ಜನ ಮುಗಿ ಬೀಳುತ್ತಿದ್ದು, ಜನಸಾಗರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಿರುಪತಿ ತಿರುಮಲ ದೇವಸ್ಥಾನಂ (TTD) ತನ್ನ ವರದಿ ನೀಡಿದೆ.
ಮೂಲಗಳ ಪ್ರಕಾರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕೋರಿಕೆಯ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಎಂಜಿನಿಯರ್‌ಗಳ ತಂಡವು ಅಯೋಧ್ಯೆಗೆ ಭೇಟಿ ನೀಡಿದ್ದು, ಜನಸಂದಣಿ ನಿರ್ವಹಣೆಯ ಕುರಿತು ಟ್ರಸ್ಟ್‌ಗೆ ತಾಂತ್ರಿಕ ಸಲಹೆಗಳನ್ನು ನೀಡಿದೆ.
ವರದಿಯಲ್ಲಿ ಜನಸಂದಣಿ ನಿರ್ವಹಣೆ, ಸರತಿ ಸಾಲಿನ ವ್ಯವಸ್ಥೆ, ನೀರಿನ ವ್ಯವಸ್ಥೆ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ಕುರಿತು ತಾಂತ್ರಿಕ ಸಲಹೆಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಟ್ರಸ್ಟ್‌ಗೆ ಸಲ್ಲಿಸಲಾಗಿದೆ ಎಂದು ಟಿಟಿಡಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಫೆಬ್ರುವರಿ 16 ಮತ್ತು 17ರಂದು ಟಿಟಿಡಿಯ ತಂಡ ರಾಮಮಂದಿರಕ್ಕೆ ಭೇಟಿ ನೀಡಿದ್ದು, ತಿರುಮಲದ ಹಾಗೆ ಭಕ್ತರಿಗೆ ತೊಂದರೆ ಮುಕ್ತ ದರ್ಶನ ವ್ಯವಸ್ಥೆ ಕಲ್ಪಿಸುವ ಕುರಿತು ಟ್ರಸ್ಟ್ ಕೆಲ ಸಲಹೆಗಳನ್ನು ನೀಡಿತ್ತು. ಇದರ ಭಾಗವಾಗಿ ಏಪ್ರಿಲ್ 13ರಂದು ಸಭೆ ನಡೆದಿದ್ದು, ಟಿಟಿಡಿಯ ತಾಂತ್ರಿಕ ಸಲಹೆಗಾರ ರಾಮಚಂದ್ರ ರೆಡ್ಡಿ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು. ರಾಮ ಮಂದಿರ ಟ್ರಸ್ಟ್ ಪರವಾಗಿ ಚಂಪತ್ ರಾಯ್, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಗೋಪಾಲಜಿ ಮತ್ತು ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



