ದೇಶ

ಕಾಂಗ್ರೆಸ್ 'ಬುದ್ಧಿಹೀನ ಫ್ರೀಬಿ'ಗಳಿಂದ ಕರ್ನಾಟಕವನ್ನು ದಿವಾಳಿಯತ್ತ ತಳ್ಳುತ್ತಿದೆ: ತೇಜಸ್ವಿ ಸೂರ್ಯ

ಕಾಂಗ್ರೆಸ್ ಪಕ್ಷದ ನೀತಿಗಳು ರಾಜ್ಯವನ್ನು ದಿವಾಳಿತನಕ್ಕೆ ತಳ್ಳುತ್ತಿವೆ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಅಭಿವೃದ್ಧಿ ಮತ್ತು ಮೂಲಸೌಕರ್ಯ ಯೋಜನೆಗಳಿಂದ ಹಣವನ್ನು ಬುದ್ಧಿಹೀನ ಉಚಿತ ಕೊಡುಗೆಗಳಾದ ಗ್ಯಾರಂಟಿಗಳತ್ತ ತಿರುಗಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ 'ಬುದ್ಧಿಹೀನ ಫ್ರೀಬಿ'ಗಳಿಂದ ಕರ್ನಾಟಕವನ್ನು ದಿವಾಳಿಯತ್ತ ತಳ್ಳುತ್ತಿದೆ: ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
Published On :

ನವದೆಹಲಿ: ಕಾಂಗ್ರೆಸ್ ಪಕ್ಷದ ನೀತಿಗಳು ರಾಜ್ಯವನ್ನು ದಿವಾಳಿತನಕ್ಕೆ ತಳ್ಳುತ್ತಿವೆ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಅಭಿವೃದ್ಧಿ ಮತ್ತು ಮೂಲಸೌಕರ್ಯ ಯೋಜನೆಗಳಿಂದ ಹಣವನ್ನು ಬುದ್ಧಿಹೀನ ಉಚಿತ ಕೊಡುಗೆಗಳಾದ ಗ್ಯಾರಂಟಿಗಳತ್ತ ತಿರುಗಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಎಎನ್‌ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಸೂರ್ಯ, ಕಳೆದ ಕೆಲವು ತಿಂಗಳುಗಳಿಂದ ಕರ್ನಾಟಕ ಸುದ್ದಿಯಾಗುತ್ತಿರುವುದನ್ನು ಗಮನಿಸಿದರೆ, ಅಭಿವೃದ್ಧಿಗೆ ಹಣವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುತ್ತಾರೆ.

ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತಾರೆ. ಏಕೆಂದರೆ ಎಲ್ಲಾ ಹಣವನ್ನು ಈಗ ಕಾಂಗ್ರೆಸ್ ಭರವಸೆಗಳನ್ನು ಈಡೇರಿಸಲು ಬಳಸುತ್ತಿದ್ದು, ದಿವಾಳಿತನದತ್ತ ರಾಜ್ಯವನ್ನು ತಳ್ಳಲಾಗುತ್ತಿದೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಇದೇ ರೀತಿಯ ನೀತಿಗಳನ್ನು ಘೋಷಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಕಟುವಾಗಿ ಟೀಕಿಸಿದ ಅವರು, ಉಚಿತ ಕೊಡುಗೆಗಳು ಕರ್ನಾಟಕ ರಾಜ್ಯದಲ್ಲಿ "ಅನಾಹುತಕಾರಿ ಪರಿಣಾಮ" ಬೀರುತ್ತಿವೆ ಎಂದು ಹೇಳಿದರು.

"ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಐದು ಗ್ಯಾರಂಟಿಗಳು ಈಗ ರಾಷ್ಟ್ರೀಯ ಯೋಜನೆಗಳಾಗಿವೆ. ಕಳೆದ 7-8 ತಿಂಗಳುಗಳಲ್ಲಿ ದುರ್ಬಲ ಆರ್ಥಿಕ ಪರಿಸ್ಥಿತಿ ಮತ್ತು ವಿನಾಶಕಾರಿ ಪರಿಣಾಮವನ್ನು ಕರ್ನಾಟಕದಲ್ಲಿ ನೋಡಿದ್ದೇವೆ" ಎಂದು ಅವರು ಹೇಳಿದರು. ಕರ್ನಾಟಕ ಸರ್ಕಾರದ ಇಂಧನ ಹಂಚಿಕೆಯನ್ನು ಉಲ್ಲೇಖಿಸಿದ ಅವರು, ಸರ್ಕಾರವು 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ವೆಚ್ಚ ಹೆಚ್ಚಾಗಿದೆ ಎಂದು ಹೇಳಿದರು.

ಬೆಂಗಳೂರು ರಾಜ್ಯದ ಜಿಡಿಪಿಯ ಶೇಕಡಾ 60 ರಷ್ಟು ಕೊಡುಗೆ ನೀಡುವ ನಗರವಾಗಿದೆ. ಆದರೂ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಯಾವುದೇ ಹಣವನ್ನು ವಿನಿಯೋಗಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಶಿಕ್ಷಣ ನೀತಿಗಳು ಇವತ್ತಲ್ಲ ನಾಳಿನ ಮಕ್ಕಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಿದರು. ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಮತ್ತೆ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.