ನವದೆಹಲಿ: ನಾರ್ತ್ ಬ್ಲಾಕ್‌ನಲ್ಲಿ ಸಣ್ಣ ಪ್ರಮಾಣದ ಅಗ್ನಿ ಅವಘಡ, ಯಾವುದೇ ಕಡತಕ್ಕೆ ಹಾನಿಯಾಗಿಲ್ಲ- MHA
ರಾಷ್ಟ್ರ ರಾಜಧಾನಿಯಲ್ಲಿರುವ ಹೆಚ್ಚಿನ ಭದ್ರತೆಯಿರುವ ಪ್ರದೇಶಗಳಲ್ಲಿ ಒಂದಾಗಿರುವ ರೈಸಿನಾ ಹಿಲ್ಸ್‌ನಲ್ಲಿರುವ ಗೃಹ ವ್ಯವಹಾರಗಳು ಮತ್ತು ಸಿಬ್ಬಂದಿ ಸಚಿವಾಲಯಗಳನ್ನು ಹೊಂದಿರುವ ನಾರ್ತ್ ಬ್ಲಾಕ್‌ನಲ್ಲಿ ಮಂಗಳವಾರ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾರೂ ಗಾಯಗೊಂಡಿಲ್ಲ, ಯಾವುದೇ ಕಡತಕ್ಕೂ ಹಾನಿಯಾಗಿಲ್ಲ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಹೆಚ್ಚಿನ ಭದ್ರತೆಯಿರುವ ಪ್ರದೇಶಗಳಲ್ಲಿ ಒಂದಾಗಿರುವ ರೈಸಿನಾ ಹಿಲ್ಸ್‌ನಲ್ಲಿರುವ ಗೃಹ ವ್ಯವಹಾರಗಳು ಮತ್ತು ಸಿಬ್ಬಂದಿ ಸಚಿವಾಲಯಗಳನ್ನು ಹೊಂದಿರುವ ನಾರ್ತ್ ಬ್ಲಾಕ್‌ನಲ್ಲಿ ಮಂಗಳವಾರ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾರೂ ಗಾಯಗೊಂಡಿಲ್ಲ, ಯಾವುದೇ ಕಡತಕ್ಕೂ ಹಾನಿಯಾಗಿಲ್ಲ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಕಟ್ಟಡದ ಎರಡನೇ ಮಹಡಿಯ ವಿದ್ಯುತ್ ಉಪಕರಣಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸಿಐಎಸ್‌ಎಫ್, ಸಿಪಿಡಬ್ಲ್ಯೂಡಿ ಮತ್ತು ದೆಹಲಿ ಅಗ್ನಿಶಾಮಕ ಸೇವೆಗಳ ಜಂಟಿ ಕಾರ್ಯಾಚರಣೆಯಿಂದ 20 ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಲಾಗಿದೆ.
ಬೆಂಕಿ ಅವಘಡದಿಂದ ಯಾವುದೇ ಗಾಯಗಳು ವರದಿಯಾಗಿಲ್ಲ. ಯಾವುದೇ ಫೈಲ್‌ಗಳು ಹಾನಿಯಾಗಿಲ್ಲ. ಕೆಲವು ಪೀಠೋಪಕರಣ ಮತ್ತಿತರ ವಸ್ತುಗಳು ಭಾಗಶಃ ಹಾನಿಗೊಳಗಾಗಿವೆ" ಎಂದು ವಕ್ತಾರರು ತಿಳಿಸಿದ್ದಾರೆ.
ಜೆರಾಕ್ಸ್ ಯಂತ್ರ, ಕೆಲವು ಕಂಪ್ಯೂಟರ್‌ಗಳು ಮತ್ತು ಕೆಲವು ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಡಿಎಫ್‌ಎಸ್ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


