ಅಮೇಥಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಧೈರ್ಯವಿಲ್ಲ: ರಾಜನಾಥ್ ಸಿಂಗ್
2019ರಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋತ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಅಲ್ಲಿಂದ ಸ್ಪರ್ಧಿಸುವ ಧೈರ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಪತ್ತನಂತಿಟ್ಟ: 2019ರಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋತ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಅಲ್ಲಿಂದ ಸ್ಪರ್ಧಿಸುವ ಧೈರ್ಯವಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.
ಅಮೇಥಿಯಲ್ಲಿ ಸೋಲು ಅನುಭವಿಸಿದ ನಂತರ ರಾಹುಲ್ ಗಾಂಧಿ ಉತ್ತರ ಪ್ರದೇಶದಿಂದ ಕೇರಳಕ್ಕೆ ವಲಸೆ ಬಂದರು ಎಂದು ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದರು.
ಇಂದು ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಕೆ ಆಂಟನಿ ಅವರ ಪರ ಪ್ರಚಾರ ನಡೆಸಿದ ರಾಜನಾಥ್ ಸಿಂಗ್ ಅವರು, ಈ ಬಾರಿ ವಯನಾಡಿನ ಜನ ರಾಹುಲ್ ಗಾಂಧಿಯನ್ನು ತಮ್ಮ ಸಂಸದರನ್ನಾಗಿ ಆಯ್ಕೆ ಮಾಡದಿರಲು ನಿರ್ಧರಿಸಿದ್ದಾರೆ ಎಂದರು.
ದೇಶದಲ್ಲಿ ವಿವಿಧ ಬಾಹ್ಯಾಕಾಶ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಲಾಂಚ್ ಮಾಡುತ್ತಿರುವಾಗ, "ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಯುವ ನಾಯಕನನ್ನು ಲಾಂಚ್ ಮಾಡಲು ಸಾಧ್ಯವಾಗುತ್ತಿಲ್ಲ" ಎಂದು ರಾಜನಾಥ್ ಸಿಂಗ್ ವ್ಯಂಗ್ಯವಾಡಿದರು.
"ಕಾಂಗ್ರೆಸ್ ಪಕ್ಷದ 'ರಾಹುಲ್ ಯಾನ' ಇನ್ನೂ ಲಾಂಚ್ ಆಗಿಲ್ಲ ಅಥವಾ ಎಲ್ಲಿಯೂ ಲ್ಯಾಂಡ್ ಸಹ ಆಗಿಲ್ಲ" ಎಂದು ವಯನಾಡ್ ಕಾಂಗ್ರೆಸ್ ಸಂಸದರ ವಿರುದ್ಧ ರಕ್ಷಣಾ ಸಚಿವರು ವಾಗ್ದಾಳಿ ನಡೆಸಿದರು.
ತಮ್ಮ ಭಾಷಣದಲ್ಲಿ, ಕಾಂಗ್ರೆಸ್ ಹಿರಿಯ ನಾಯಕ ಎ ಕೆ ಆಂಟನಿ ಅವರನ್ನು ಹೊಗಳಿದ ರಾಜನಾಥ್ ಸಿಂಗ್, ಅವರು ಒಬ್ಬ ಶಿಸ್ತುಬದ್ಧ ಮತ್ತು ತತ್ವಬದ್ಧ ವ್ಯಕ್ತಿ ಎಂದು ಕರೆದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಅನಿಲ್ ಆಂಟೋನಿ ಸೋಲಬೇಕು ಎಂಬ ಆ್ಯಂಟನಿ ಹೇಳಿಕೆ ಓದಿ ಆಶ್ಚರ್ಯವಾಯಿತು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



