ಮತದಾನ ನಡೆದ ಮರುದಿನವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ನಿಧನ!
ಮತದಾನ ನಡೆದ ಮರುದಿನವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ನಿಧನರಾಗಿದ್ದಾರೆ. ಮೊರಾದಾಬಾದ್‌ನಲ್ಲಿ ನಿನ್ನೆಯಷ್ಟೇ ಮತದಾನ ನಡೆದಿತ್ತು.

ಉತ್ತರ ಪ್ರದೇಶ: ಮತದಾನ ನಡೆದ ಮರುದಿನವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ನಿಧನರಾಗಿದ್ದಾರೆ. ಮೊರಾದಾಬಾದ್‌ನಲ್ಲಿ ನಿನ್ನೆಯಷ್ಟೇ ಮತದಾನ ನಡೆದಿತ್ತು.
ಸರ್ವೇಶ್ ಸಿಂಗ್ ಕೂಡ ಮತ ಚಲಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ಅವರ ಆರೋಗ್ಯ ಹದಗೆಟ್ಟಿತ್ತು. ಅವರ ಹಲ್ಲುಗಳಲ್ಲಿ ಸ್ವಲ್ಪ ಸಮಸ್ಯೆ ಇತ್ತು. ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಆ ನಂತರ ಸಮಸ್ಯೆ ಉಲ್ಬಣಿಸಿದಾಗ ಚಿಕಿತ್ಸೆ ಪಡೆಯಲು ದೆಹಲಿ ಏಮ್ಸ್‌ಗೆ ತೆರಳಿದ್ದರು. ಅಲ್ಲಿ ಅವರಿಗೆ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಅವರ ನಿಧನದ ಸುದ್ದಿ ಬಿಜೆಪಿಯಲ್ಲಿ ಶೋಕದ ಅಲೆಯನ್ನು ಸೃಷ್ಟಿಸಿದೆ.
ನಾಮನಿರ್ದೇಶನಗೊಂಡಾಗಿನಿಂದ ಅವರು ನಿರಂತರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಅವರು ತಮ್ಮ ಸ್ವಗ್ರಾಮ ರತುಪುರದಲ್ಲಿ ಮತ ಚಲಾಯಿಸಿದ್ದರು. ಆದರೆ ಸಂಜೆ ಅವರ ಆರೋಗ್ಯ ಹದಗೆಟ್ಟಿತು. ಕೂಡಲೇ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ 6.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರ್ವೇಶ್ ಸಿಂಗ್ ಅವರ ಪುತ್ರ ಸುಶಾಂತ್ ಸಿಂಗ್ ಅವರು ಬಿಜ್ನೋರ್‌ನ ಬಾಧಾಪುರ್ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿದ್ದಾರೆ.
ಸರ್ವೇಶ್ ಸಿಂಗ್ ಅವರ ಬಾಯಲ್ಲಿ ಏನೋ ಸಮಸ್ಯೆ ಇತ್ತು. ಇದರಿಂದಾಗಿ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದರಿಂದಾಗಿ ಲೋಕಸಭೆಗೆ ನಾಮಪತ್ರ ಸಲ್ಲಿಸಿದ ದಿನದಿಂದಲೂ ಕ್ಷೇತ್ರದಿಂದ ನಾಪತ್ತೆಯಾಗಿದ್ದರು. ಅವರ ಪುತ್ರ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದರು. ವಿಶ್ರಾಂತಿ ಪಡೆದ ನಂತರ ಅವರು ಅಮಿತ್ ಶಾ ರ್ಯಾಲಿಯಲ್ಲಿ ವೇದಿಕೆಯಲ್ಲಿ ಕಾಣಿಸಿಕೊಂಡರು. ಏಪ್ರಿಲ್ 19ರಂದು ಮತದಾನದ ನಂತರ ಮತ್ತೆ ಅಸ್ವಸ್ಥಗೊಂಡ ಅವರು ಶುಕ್ರವಾರ ತಡರಾತ್ರಿ ದೆಹಲಿಯ ಏಮ್ಸ್‌ಗೆ ವೈದ್ಯರನ್ನು ಭೇಟಿಯಾಗಲು ತೆರಳಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.
2014ರಲ್ಲಿ ಮೊರಾದಾಬಾದ್‌ನಿಂದ ಗೆದ್ದಿದ್ದ ಸಂಸದ
ಕುನ್ವರ್ ಸರ್ವೇಶ್ ಸಿಂಗ್ ಅವರು 2014ರಲ್ಲಿ ಮೊರಾದಾಬಾದ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದಕ್ಕೂ ಮೊದಲು 2009 ರಲ್ಲಿ, ಅವರು ಮೊದಲ ಬಾರಿಗೆ ಈ ಕ್ಷೇತ್ರದಿಂದ ಎಂಪಿ ಚುನಾವಣೆಗೆ ಸ್ಪರ್ಧಿಸಿದರು ಆದರೆ ಕಾಂಗ್ರೆಸ್ ಅಭ್ಯರ್ಥಿ ಮೊಹಮ್ಮದ್ ಅಜರುದ್ದೀನ್ ವಿರುದ್ಧ ಸೋತಿದ್ದರು. 2019ರಲ್ಲಿಯೂ ಸಹ ಬಿಜೆಪಿ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿತು. ಆದರೆ ಅವರು ಚುನಾವಣೆಯಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿಯಲ್ಲಿ ಎಸ್‌ಪಿ ಅಭ್ಯರ್ಥಿ ಡಾ. ಎಸ್‌ಟಿ ಹಸನ್ ವಿರುದ್ಧ ಸೋತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



