ಬಿಜೆಪಿ ಪ್ರಚಾರಕ್ಕೆ ಸಹಾಯ ಮಾಡಲು ಚುನಾವಣಾ ಆಯೋಗ ಏಳು ಹಂತದ ಚುನಾವಣೆ ನಡೆಸುತ್ತಿದೆ: ಮಮತಾ
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡಲು ಕೇಂದ್ರ ಚುನಾವಣಾ ಆಯೋಗ ಏಳು ಹಂತದ ಚುನಾವಣೆ ನಡೆಸುತ್ತಿದೆ.

ಮಾಲ್ಡಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡಲು ಕೇಂದ್ರ ಚುನಾವಣಾ ಆಯೋಗ ಏಳು ಹಂತದ ಚುನಾವಣೆ ನಡೆಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.
ಇಂದು ಮಾಲ್ಡಾ ಜಿಲ್ಲೆಯ ಗಜೋಲ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಚುನಾವಣೆ ನಿಗದಿಪಡಿಸಲಾಗಿದೆ. ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು "ಪ್ರತಿಪಕ್ಷಗಳನ್ನು ಹತ್ತಿಕ್ಕಲು" ಪ್ರತಿ ಹಂತಕ್ಕೂ ಮೊದಲು ದೇಶಾದ್ಯಂತ ವಿಶೇಷ ವಿಮಾನಗಳಲ್ಲಿ ಪ್ರಯಾಣಿಸಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
"ಈ ಹಿಂದೆ, ಮೇ ತಿಂಗಳೊಳಗೆ ಚುನಾವಣೆಗಳು ಮುಗಿಯುತ್ತಿದ್ದವು. ಆದರೆ ಈ ವರ್ಷ, ಮೋದಿ ಮಿಲಿಟರಿ ವಿಮಾನಗಳಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಅನುವು ಮಾಡಿಕೊಡುವುದಕ್ಕಾಗಿ ಜೂನ್ 1 ರವರೆಗೆ ಮತದಾನ ವಿಸ್ತರಿಸಲಾಗಿದೆ. ಬಿಜೆಪಿ ನಾಯಕರೂ ಹೆಲಿಕಾಪ್ಟರ್‌ಗಳು ಬುಕ್ ಮಾಡಿದ್ದು, ನಮಗೆ ಹೆಲಿಕಾಪ್ಟರ್ ಗಳೇ ಸಿಗುತ್ತಿಲ್ಲ'' ಎಂದು ಪಶ್ಚಿಮ ಬಂಗಾಳ ಸಿಎಂ ದೂರಿದ್ದಾರೆ.
ಬಿಸಿಲಿನ ತಾಪದಿಂದ ಜನ ತುಂಬಾ ತೊಂದರೆಗೀಡಾಗಿದ್ದಾರೆ. ಆದರೆ ಅವರು(ಬಿಜೆಪಿ ನಾಯಕರು) ಎಲ್ಲಾ ಸೌಲಭ್ಯಗಳೊಂದಿಗೆ ವಿವಿಐಪಿ ಪ್ರಚಾರ ಮಾಡುತ್ತಿದ್ದು, ಮೋದಿ ವಿಚಲಿತರಾಗಿದ್ದಾರೆ ಎಂದರು.
ಚುನಾವಣೆ ಘೋಷಣೆಯಾದ ನಂತರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಉಸ್ತುವಾರಿಯಾಗಿ ಮುಂದುವರೆದಿರುತ್ತದೆ. ಚುನಾವಣಾ ಆಯೋಗ ಆಡಳಿತ ಯಂತ್ರವನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದರೂ, "ಮೋದಿ ಮತ್ತು ಅವರ ಪಕ್ಷದ ಸಹೋದ್ಯೋಗಿಗಳ ನಿರ್ದೇಶನದಂತೆ ನಡೆದುಕೊಳ್ಳುತ್ತಿದೆ" ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



