ದೇಶ

ಛತ್ತೀಸ್‌ಗಢ: ಬಸ್ ಪಲ್ಟಿ; 10 CRPF ಯೋಧರಿಗೆ ಗಾಯ

ಚುನಾವಣಾ ಕರ್ತವ್ಯಕ್ಕೆ ಯೋಧರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ಬಸ್ತರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಛತ್ತೀಸ್‌ಗಢ: ಬಸ್ ಪಲ್ಟಿ; 10 CRPF ಯೋಧರಿಗೆ ಗಾಯ
ಪಲ್ಟಿಯಾದ ಬಸ್
Published On :

ಬಸ್ತಾರ್: ಚುನಾವಣಾ ಕರ್ತವ್ಯಕ್ಕೆ ಯೋಧರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ಬಸ್ತರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಮೊದಲ ಹಂತದ ಚುನಾವಣಾ ಕರ್ತವ್ಯ ಪೂರ್ಣಗೊಳಿಸಿದ ನಂತರ ಮಧ್ಯಪ್ರದೇಶದ ಎರಡನೇ ಬೆಟಾಲಿಯನ್ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಜಿಲ್ಲೆಯ ದಿಲ್ಮಿಲಿ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ಐಜಿ ಸುಂದರರಾಜ್ ಹೇಳಿದ್ದಾರೆ.

ಅಪಘಾತದಲ್ಲಿ ಒಂಬತ್ತು ಯೋಧರು ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ. ಏಪ್ರಿಲ್ 19 ರಂದು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದಿತ್ತು. ಮೊದಲ ಹಂತದ ಚುನಾವಣೆಯ ಚುನಾವಣಾ ಕರ್ತವ್ಯವನ್ನು ಪೂರ್ಣಗೊಳಿಸಿದ ನಂತರ ಯೋಧರು ಎರಡನೇ ಹಂತದ ಕರ್ತವ್ಯಕ್ಕೆ ತೆರಳುತ್ತಿದ್ದರು. ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು,ದಾರಿಯಲ್ಲಿದ್ದ ಚಿಕ್ಕ ವಾಹನವನ್ನು ರಕ್ಷಿಸಲು ಬಸ್ ಚಾಲಕ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.