ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ. ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ. ದಂಡ!
ದೆಹಲಿ ಸಿಎಂ ಕೇಜ್ರಿವಾಲ್
Published On :

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.

ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಯುವವರೆಗೆ ಅವರಿಗೆ ಜಾಮೀನು ಒದಗಿಸಬೇಕೆಂದು ಅರ್ಜಿಯಲ್ಲಿ ವಿನಂತಿಸಲಾಗಿತ್ತು.

ಈ ಅರ್ಜಿಯನ್ನು ತಿರಸ್ಕರಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಮತ್ತು ನ್ಯಾಯಮೂರ್ತಿ ಮನಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರ ವಿಭಾಗೀಯ ಪೀಠ, ಅರ್ಜಿಯನ್ನು ಯಾವುದೇ ಆಧಾರವಿಲ್ಲದೆ ಸಲ್ಲಿಸಲಾಗಿದೆ. ಪಿಐಎಲ್‌ ಸಲ್ಲಿಸಲು ಕೇಜ್ರಿವಾಲ್‌ ಅಧಿಕಾರ ನೀಡಿದ ಪವರ್‌ ಆಫ್‌ ಅಟಾರ್ನಿಯನ್ನು ಅರ್ಜಿದಾರರು ಹೊಂದಿಲ್ಲ ಎಂದು ಹೇಳಿದ ನ್ಯಾಯಾಲಯ ಅರ್ಜಿದಾರನಿಗೆ ರೂ 75,000 ವೆಚ್ಚಗಳನ್ನು ಪಾವತಿಸುವಂತೆ ಆದೇಶಿಸಿದೆ.

ಈ ಪಿಐಎಲ್‌ ಅನ್ನು “ವಿ, ದಿ ಪೀಪಲ್‌ ಆಫ್‌ ಇಂಡಿಯಾ” ಎಂಬ ಹೆಸರಿನಲ್ಲಿ ಸಲ್ಲಿಸಲಾಗಿತ್ತಲ್ಲದೆ. ತಮಗೆ ಯಾವುದೇ ಪ್ರಚಾರ ಬೇಡ ಎಂದು ಹೇಳಿ ಹೆಸರು ಬಳಸಿಲ್ಲ, ತಾವು ದೆಹಲಿ ಜನರನ್ನು ಪ್ರತಿನಿಧಿಸುತ್ತಿರುವುದಾಗಿ ಅರ್ಜಿದಾರ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.