ಮೋದಿಯನ್ನು ನಿಂದಿಸುವ ಯಾರೂ ಮನೆ ತಲುಪುವುದಿಲ್ಲ: ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ರಾಣೆ ಬೆದರಿಕೆ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರಾದರೂ ನಿಂದಿಸಿದರೆ ಅವರು ಮರಳಿ ಮನೆ ತಲುಪಲು ಬಿಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಮಂಗಳವಾರ ಬೆದರಿಕೆ ಹಾಕಿದ್ದಾರೆ.

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರಾದರೂ ನಿಂದಿಸಿದರೆ ಅವರು ಮರಳಿ ಮನೆ ತಲುಪಲು ಬಿಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಮಂಗಳವಾರ ಬೆದರಿಕೆ ಹಾಕಿದ್ದಾರೆ.
ಮಹಾರಾಷ್ಟ್ರದ ಕರಾವಳಿಯ ರತ್ನಗಿರಿ-ಸಿಂಧುದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಾಣೆ ಅವರು ಸಿಂಧುದುರ್ಗ ಜಿಲ್ಲೆಯಲ್ಲಿ ಸೋಮವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.
ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಪಕ್ಷದ ಸಂಸದ ಸಂಜಯ್ ರಾವತ್ ಅವರು ಏನು ಮಾತನಾಡುತ್ತಿದ್ದಾರೆಂದು ಅರ್ಥವಾಗದೆ ಮೋದಿಯನ್ನು ಟೀಕಿಸುತ್ತಾರೆ ಎಂದು ಶಿವಸೇನೆ ಮಾಜಿ ನಾಯಕರಾದ ರಾಣೆ ವಾಗ್ದಾಳಿ ನಡೆಸಿದರು.
"ವಿರೋಧ ಪಕ್ಷಗಳು ಶೀಘ್ರದಲ್ಲೇ ಸಿಂಧುದುರ್ಗದಲ್ಲಿ ರ್ಯಾಲಿ ನಡೆಸಲಿವೆ ಎಂದು ನನಗೆ ತಿಳಿದಿದೆ. ರ್ಯಾಲಿ ನಡೆಸಲಿ ಅದು ಪ್ರಜಾಪ್ರಭುತ್ವದ ಭಾಗವಾಗಿದೆ. ಆದರೆ ನಮ್ಮ ನಾಯಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರಾದರೂ ಕೆಟ್ಟ ಭಾಷೆ ಬಳಸಿದರೆ, ಆ ವ್ಯಕ್ತಿಯನ್ನು ನಾವು ಇಲ್ಲಿಂದ ಮನೆಗೆ ಹೋಗಲು ಬಿಡುವುದಿಲ್ಲ" ಎಂದು ರಾಣೆ ಎಚ್ಚರಿಕೆ ನೀಡಿದರು.
2005 ರಲ್ಲಿ ಉದ್ಧವ್ ಠಾಕ್ರೆ ಅವರೊಂದಿಗೆ ಮುನಿಸಿಕೊಂಡ ನಂತರ ಶಿವಸೇನೆ ತೊರೆದ ಬಿಜೆಪಿ ನಾಯಕ ರಾಣೆ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಉದ್ಧವ್ ಠಾಕ್ರೆ ಅವರನ್ನು ಅವರ ತಂದೆ ಬಾಳ್ ಠಾಕ್ರೆ ಆಯ್ಕೆ ಮಾಡುತ್ತಿರಲಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



