Excise Policy Scam: ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ; ಮೇ 7ರವರೆಗೂ ಕೇಜ್ರಿವಾಲ್, ಕವಿತಾ ಗೆ ಜೈಲು!
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.
ಹೌದು.. ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು BRS ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7 ರವರೆಗೆ ವಿಸ್ತರಿಸಿದೆ.
ಉಭಯ ನಾಯಕರ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಇಂದು ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಸಿಬಿಐ ಮತ್ತು ಇಡಿ ವಿಷಯಗಳ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಹಾಜರು ಪಡಿಸಲಾಯಿತು. ಈ ವೇಳೆ ವಾದ ಆಲಿಸಿದ ನ್ಯಾಯಾಧೀಶರು ಮೇ 7ರವರೆಗೂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿದರು.
ಅಂದಹಾಗೆ ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ತೆಲಂಗಾಣ ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಮತ್ತು ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಬಂಧಿಸಲಾಗಿದೆ.

Arvind Kejriwal ಕಳ್ಳಾಟ? ಶುಗರ್ ಹೆಚ್ಚಿಸಿಕೊಂಡು ಜಾಮೀನು ಪಡೆಯಲು ಜೈಲಲ್ಲಿ ಹೆಚ್ಚು ಮಾವು, ಸಿಹಿ ಸೇವನೆ: ED ಆರೋಪ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



