ದೇಶ

ರೈಲ್ವೆ ನಿಲ್ದಾಣಗಳಲ್ಲಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಊಟದ ವ್ಯವಸ್ಥೆ!

ಜನರಲ್ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಈಗ ನಿಲ್ದಾಣಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ನಿಲ್ದಾಣಗಳಲ್ಲಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಊಟದ ವ್ಯವಸ್ಥೆ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಜನರಲ್ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಈಗ ನಿಲ್ದಾಣಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

100 ಕ್ಕೂ ಹೆಚ್ಚು ನಿಲ್ದಾಣಗಳು ಸೇರಿದಂತೆ ಭಾರತೀಯ ರೈಲ್ವೆಯಾದ್ಯಂತ ಸುಮಾರು 150 ಕೌಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸೌಲಭ್ಯವನ್ನು ಮತ್ತಷ್ಟು ವಿಸ್ತರಿಸಲಾಗುವುದು ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಜೊತೆಗೆ ಭಾರತೀಯ ರೈಲ್ವೇ ಪ್ರಯಾಣಿಕರಿಗೆ, ವಿಶೇಷವಾಗಿ ಸಾಮಾನ್ಯ ಬೋಗಿಗಳಲ್ಲಿ ತೆರಳುವ ಪ್ರಯಾಣಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೇಸಿಗೆಯ ತಿಂಗಳುಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಸಾಮಾನ್ಯವಾಗಿ ಹೆಚ್ಚಳವಿರುತ್ತದೆ. ಜನರಲ್ ಕಂಪಾರ್ಟ್‌ಮೆಂಟ್‌ಗಳಲ್ಲಿ ತೆರಳುವವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಇವೆಲ್ಲಾವನ್ನು ಮನಗೊಂಡು ಬಜೆಟ್ ಸ್ನೇಹಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.