ಆಂಧ್ರ ಪ್ರದೇಶ: 164 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!
ಜನಸೇನಾ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಅವರ ಕುಟುಂಬವು 164.53 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದೆ ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಅವರ ಆದಾಯ ಸುಮಾರು 60 ಕೋಟಿ ರೂ. ಹೆಚ್ಚಾಗಿದೆ.

ವಿಜಯವಾಡ: ಜನಸೇನಾ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಅವರ ಕುಟುಂಬವು 164.53 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದೆ ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಅವರ ಆದಾಯ ಸುಮಾರು 60 ಕೋಟಿ ರೂ. ಹೆಚ್ಚಾಗಿದೆ.
ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, ಪವನ್ ಕಲ್ಯಾಣ್ 65.77 ಕೋಟಿ ರೂ.ಗಳಷ್ಟು ಹೊಣೆಗಾರಿಕೆ ಹೊಂದಿದ್ದಾರೆ. ನಾಲ್ವರು ಮಕ್ಕಳು ಒಳಗೊಂಡಂತೆ ಅವರ ಕುಟುಂಬವು 46.17 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿ ಮತ್ತು 118.36 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದೆ. 2018-19ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ 1.10 ಕೋಟಿ ರೂಪಾಯಿ ನಷ್ಟವನ್ನು ತೋರಿಸಿದ್ದರು.
ಆಂಧ್ರಪ್ರದೇಶದ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಪವನ್ ಕಲ್ಯಾಣ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಮೈತ್ರಿ ಪಕ್ಷಗಳ ನಡುವಿನ ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ, ಟಿಡಿಪಿಗೆ 144 ಅಸೆಂಬ್ಲಿ ಮತ್ತು 17 ಲೋಕಸಭಾ ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದ್ದು, ಬಿಜೆಪಿ ಆರು ಲೋಕಸಭೆ ಮತ್ತು 10 ವಿಧಾನಸಭೆ ಸ್ಥಾನಗಳನ್ನು ಸ್ಪರ್ಧಿಸಲಿದೆ. ಜನಸೇನಾ ಎರಡು ಲೋಕಸಭೆ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ.
ಜನಸೇನಾ ಮುಖ್ಯಸ್ಥಾಗಿರುವ ಪವನ್ ಕಲ್ಯಾಣ್ ಹರ್ಲಿ ಡೇವಿಡ್ಸನ್ ಬೈಕ್ ಮತ್ತು ರೇಂಜ್ ರೋವರ್ ಸೇರಿದಂತೆ 11 ವಾಹನಗಳನ್ನು ಹೊಂದಿದ್ದಾರೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



