ಸಲ್ಮಾನ್ ಖಾನ್ ನಿವಾಸದ ಹೊರಗೆ ಫೈರಿಂಗ್: ತಾಪಿ ನದಿಯಲ್ಲಿ ಎರಡು ಪಿಸ್ತೂಲ್, ಮ್ಯಾಗಜೀನ್‌ಗಳು ಪತ್ತೆ
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಮುಂಬೈ ಪೊಲೀಸರು ಗುಜರಾತ್‌ನ ತಾಪಿ ನದಿಯಲ್ಲಿ ಪತ್ತೆ ಹಚ್ಚಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಮುಂಬೈ ಪೊಲೀಸರು ಗುಜರಾತ್‌ನ ತಾಪಿ ನದಿಯಲ್ಲಿ ಪತ್ತೆ ಹಚ್ಚಿದ್ದು, ಎರಡು ಪಿಸ್ತೂಲ್‌ಗಳು, ಮ್ಯಾಗಜೀನ್‌ಗಳು ಮತ್ತು ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ಆರಂಭವಾದ ಶೋಧ ಕಾರ್ಯಾಚರಣೆ ವೇಳೆ ಎರಡು ಪಿಸ್ತೂಲ್‌ಗಳು, ಮೂರು ಮ್ಯಾಗಜೀನ್‌ಗಳು ಮತ್ತು 13 ಬುಲೆಟ್‌ಗಳನ್ನು ಮುಂಬೈ ಪೊಲೀಸ್ ಅಪರಾಧ ವಿಭಾಗ ವಶಪಡಿಸಿಕೊಂಡಿದೆ ಎಂದು ಅಧಿಕಾರಿ ಹೇಳಿದ್ದಾರೆ.
‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಸೇರಿದಂತೆ 12 ಅಧಿಕಾರಿಗಳ ತಂಡ ಇನ್ನೂ ಸ್ಥಳದಲ್ಲಿಯೇ ಇದೆ. ಸ್ಕೂಬಾ ಡೈವರ್‌ಗಳ ಸಹಾಯದಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇಬ್ಬರು ಬಂಧಿತ ಆರೋಪಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಎಪ್ರಿಲ್ 14 ರಂದು ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ 58 ವರ್ಷದ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿ ನಂತರ ಮೋಟಾರ್‌ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದರು.
ಏಪ್ರಿಲ್ 16 ರಂದು ಮುಂಬೈ ಮತ್ತು ಕಚ್ ಪೊಲೀಸರ ಜಂಟಿ ತಂಡ, ಗುಜರಾತ್‌ನ ಭುಜ್ ನಲ್ಲಿ ಬಂಧಿಸಿತ್ತು. ನಂತರ ಹೆಚ್ಚಿನ ತನಿಖೆಗಾಗಿ ಅವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



