ಹವಾಮಾನ: ಇನ್ನೂ ಹೆಚ್ಚಾಗಲಿದೆ Heat wave; ಕರ್ನಾಟಕ, ಒಡಿಶಾ, ತಮಿಳುನಾಡು ಸೇರಿ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಣೆ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹವಾಮಾನ ಮುನ್ನೋಟದಲ್ಲಿ Heat wave ವಿಷಯವಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಣೆ ಮಾಡಿದೆ.

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹವಾಮಾನ ಮುನ್ನೋಟದಲ್ಲಿ Heat wave ವಿಷಯವಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಣೆ ಮಾಡಿದೆ.
ಭಾರತದ ಪೂರ್ವ ಹಾಗೂ ದಕ್ಷಿಣ ಪ್ರದೇಶಗಳಲ್ಲಿ Heat wave ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ 5 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕರ್ನಾಟಕ, ಗೋವಾ, ಕೇರಳ, ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಬಿಹಾರ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ, ಹೆಚ್ಚಿನ ಹ್ಯುಮಿಡಿಟಿ ಮಟ್ಟಗಳು ಉಲ್ಬಣಗೊಳ್ಳಲಿವೆ ಎಂದು ಐಎಂಡಿ ಹೇಳಿದೆ.
ಹವಾಮಾನ ಕೇಂದ್ರದಲ್ಲಿ ತಾಪಮಾನ 40 ಡಿಗ್ರಿ ಸೆಲ್ಷಿಯಸ್ ತಲುಪಿದಾಗ ಅದನ್ನು ಅಧಿಕೃತವಾಗಿ Heat wave ಎಂದು ಪರಿಗಣಿಸಲಾಗುತ್ತದೆ. ಕರಾವಳಿ ಪ್ರದೇಶಗಳಲ್ಲಿ 37 ಡಿಗ್ರಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ 30 ಡಿಗ್ರಿ ಸೆಲ್ಷಿಯಸ್ ತಲುಪಿದರೆ ಅದನ್ನು Heat wave ಎಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ದಾಖಲಾಗುವುದಕ್ಕಿಂತ 4.5 notches ಹೆಚ್ಚಳವಾದರೆ ಅದನ್ನು Heat wave ಎಂದೂ 6.4 notches ಹೆಚ್ಚಳವಾದರೆ ಅದನ್ನು ತೀವ್ರ ಉಷ್ಣಹವೆ ಎಂದು ಪರಿಗಣಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


