ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ಭಾಷಣದ ಬಗ್ಗೆ BJP ಪ್ರತಿಕ್ರಿಯೆ ಕೇಳಿದ EC
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಬಿಜೆಪಿ ಸೂಚಿಸಿದೆ.

ನವದೆಹಲಿ: ರಾಜಸ್ಥಾನದ ಚುನಾವಣಾ ರ್‍ಯಾಲಿಯಲ್ಲಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಬಿಜೆಪಿ ಸೂಚಿಸಿದೆ.
ಮೋದಿ ಭಾಷಣದ ಬಗ್ಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ನೀಡಿರುವ ದೂರಿನ ಮೇರೆಗೆ ಚುನಾವಣಾ ಆಯೋಗ ಬಿಜೆಪಿಯಿಂದ ಪ್ರತಿಕ್ರಿಯೆ ಕೇಳಿದೆ.
ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬುದನ್ನು ಚುನಾವಣಾ ಆಯೋಗ ಗಮನಿಸಿದೆ. ಪ್ರಧಾನಿ ಮೋದಿ, ರಾಹುಲ್ ಗಾಂಧಿ ವಿರುದ್ಧದ ನೀತಿ ಸಂಹಿತ ಉಲ್ಲಂಘನೆ ಆರೋಪಗಳನ್ನು ಬಿಜೆಪಿ, ಕಾಂಗ್ರೆಸ್ ಮುಖ್ಯಸ್ಥರೊಂದಿಗೆ ಚುನಾವಣಾ ಹಂಚಿಕೊಂಡಿದೆ ಮತ್ತು ಏಪ್ರಿಲ್ 29 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಉನ್ನತ ಹುದ್ದೆಯಲ್ಲಿರುವವರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಚುನಾವಣಾ ಆಯೋಗ ಹೇಳಿದೆ.
ಪ್ರಧಾನಿ ಮೋದಿ ಹೇಳಿಕೆ "ಒಡಕುಂಟು ಮಾಡುವ", "ದುರುದ್ದೇಶಪೂರಿತ" ಮತ್ತು ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿದೆ ಎಂದು ಆರೋಪಿಸಿ ಕಳೆದ ಸೋಮವಾರ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




