ನಟ ಸಲ್ಮಾನ್ ಖಾನ್ ನಿವಾಸದ ಹೊರಗಡೆ ಗುಂಡಿನ ದಾಳಿ: ಪಂಜಾಬ್‌ನಲ್ಲಿ ಮತ್ತಿಬ್ಬರು ಬಂಧನ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗಡೆ ಇತ್ತೀಚಿಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಗುರುವಾರ ಪಂಜಾಬ್‌ನಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗಡೆ ಇತ್ತೀಚಿಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಗುರುವಾರ ಪಂಜಾಬ್‌ನಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರೂ ಮಾರ್ಚ್ 15 ರಂದು ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಮತ್ತು ಕಾಟ್ರಿಡ್ಜ್‌ಗಳನ್ನು ಒದಗಿಸಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇಬ್ಬರನ್ನೂ ಕ್ರೈಂ ಬ್ರಾಂಚ್ ತಂಡ ಬಂಧಿಸಿದ್ದು, ಮುಂಬೈಗೆ ಕರೆತರಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಮಧ್ಯೆ ಇದೇ ಪ್ರಕರಣದಲ್ಲಿ ಬಂಧಿಸಲಾದ ಮತ್ತಿಬ್ಬರನ್ನು ಮುಂಬೈ ನ್ಯಾಯಾಲಯವು ಏಪ್ರಿಲ್ 29 ರವರೆಗೆ ಪೊಲೀಸ್ ಕಸ್ಟಡಿಯನ್ನು ಗುರುವಾರ ವಿಸ್ತರಿಸಿದೆ. ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಅವರ ರಿಮಾಂಡ್ ಕೊನೆಗೊಂಡ ನಂತರ ಇಲ್ಲಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಗುಪ್ತಾ ಮತ್ತು ಪಾಲ್ ಏಪ್ರಿಲ್ 14 ರ ಮುಂಜಾನೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ 58 ವರ್ಷದ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿ, ಮೊಬೈಕ್ ನಲ್ಲಿ ಅಲ್ಲಿಂದ ಪರಾರಿಯಾಗಿದ್ದರು.
ಅವರನ್ನು ಏಪ್ರಿಲ್ 16 ರಂದು ಗುಜರಾತ್‌ನ ಕಚ್ ಜಿಲ್ಲೆಯ ಮಾತಾ ನೊ ಮಧ್ ಗ್ರಾಮದಿಂದ ಬಂಧಿಸಲಾಗಿತ್ತು. ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಈ ಪ್ರಕರಣದಲ್ಲಿ ಬೇಕಾಗಿರುವ ಆರೋಪಿಗಳೆಂದು ಪೊಲೀಸರು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



