ಬಿಹಾರ: ಪಾಟ್ನಾದಲ್ಲಿ ಜೆಡಿಯು ನಾಯಕನಿಗೆ ಗುಂಡಿಕ್ಕಿ ಹತ್ಯೆ
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬುಧವಾರ ರಾತ್ರಿ ಆಡಳಿತರೂಢ ಜೆಡಿಯು ನಾಯಕ ಸೌರಭ್ ಕುಮಾರ್ ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬುಧವಾರ ರಾತ್ರಿ ಆಡಳಿತರೂಢ ಜೆಡಿಯು ನಾಯಕ ಸೌರಭ್ ಕುಮಾರ್ ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೌರಭ್ ಕುಮಾರ್ ಮದುವೆಯ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ ಜೆಡಿಯು ನಾಯಕನ ಜೊತೆಗಿದ್ದ ಒಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ.
"ಸೌರಭ್ ಕುಮಾರ್ ಅವರು ತಮ್ಮ ಸ್ನೇಹಿತರೊಂದಿಗೆ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು. ಹಿಂದಿರುಗುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಸೌರಭ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆ ವೇಳೆಗಾಗಲೇ ಸೌರಭ್ ಕುಮಾರ್ ಮೃತಪಟ್ಟಿದ್ದಾರೆ ಎಂದು ಎಸ್‌ಡಿಪಿಒ ಮಸೌರಿ ಕನ್ಹಯ್ಯ ಸಿಂಗ್ ಅವರು ತಿಳಿಸಿದ್ದಾರೆ.
ಅಪರಿಚಿತ ದಾಳಿಕೋರರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



