ದೇಶ

ದೆಹಲಿಯಲ್ಲಿ ಲೋಕಸಭಾ ಚುನಾವಣೆಗಾಗಿ ಎಎಪಿ 'ವಾರ್ ರೂಮ್' ಉದ್ಘಾಟನೆ

ದೆಹಲಿಯಲ್ಲಿ ಲೋಕಸಭೆ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷದ "ವಾರ್ ರೂಮ್" ಅನ್ನು ಪಕ್ಷದ ಹಿರಿಯ ನಾಯಕ ಗೋಪಾಲ್ ರೈ ಅವರು ಶನಿವಾರ ಉದ್ಘಾಟಿಸಿದರು.

ದೆಹಲಿಯಲ್ಲಿ ಲೋಕಸಭಾ ಚುನಾವಣೆಗಾಗಿ ಎಎಪಿ 'ವಾರ್ ರೂಮ್' ಉದ್ಘಾಟನೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿಯಲ್ಲಿ ಲೋಕಸಭೆ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷದ "ವಾರ್ ರೂಮ್" ಅನ್ನು ಪಕ್ಷದ ಹಿರಿಯ ನಾಯಕ ಗೋಪಾಲ್ ರೈ ಅವರು ಶನಿವಾರ ಉದ್ಘಾಟಿಸಿದರು.

ರಾಷ್ಟ್ರ ರಾಜಧಾನಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಆಪ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಮತ್ತು ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷ ಕಾಂಗ್ರೆಸ್ ಮೂರರಲ್ಲಿ ಸ್ಪರ್ಧಿಸುತ್ತಿದೆ. ಮೇ 25 ರಂದು ಆರನೇ ಹಂತದಲ್ಲಿ ಎಲ್ಲಾ ಏಳು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಡಿಡಿಯು ಮಾರ್ಗದಲ್ಲಿರುವ ಎಎಪಿ ಪ್ರಧಾನ ಕಛೇರಿಯಲ್ಲಿ ಎಎಪಿ "ವಾರ್ ರೂಮ್"ಗೆ ಚಾಲನೆ ನೀಡಲಾಗಿದ್ದು, ವಿವಿಧ ಉದ್ದೇಶಗಳಿಗಾಗಿ 12 ತಂಡಗಳನ್ನು ಈ ವಾರ್ ರೂಮ್ ಹೊಂದಿರುತ್ತದೆ ಎಂದು ಪಕ್ಷದ ದೆಹಲಿ ಘಟಕದ ಸಂಚಾಲಕ ರೈ ಹೇಳಿದ್ದಾರೆ.

ಎಎಪಿ ಪೂರ್ವ ದೆಹಲಿ, ದಕ್ಷಿಣ ದೆಹಲಿ, ಪಶ್ಚಿಮ ದೆಹಲಿ ಮತ್ತು ನವದೆಹಲಿಯಿಂದ ಎಎಪಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್, ಈಶಾನ್ಯ ದೆಹಲಿ, ವಾಯವ್ಯ ದೆಹಲಿ ಮತ್ತು ಚಾಂದಿನಿ ಚೌಕ್‌ನಿಂದ ಸ್ಪರ್ಧಿಸುತ್ತಿದೆ.

ನಾಲ್ಕು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಆಪ್‌ನ ಚುನಾವಣಾ ಪ್ರಚಾರವನ್ನು ಸಂಘಟಿತವಾಗಿ ನಡೆಸುವುದನ್ನು ಅವರು ಖಚಿತಪಡಿಸಿಕೊಳ್ಳುತ್ತಾರೆ ಎಂದು ಗೋಪಾಲ್ ರೈ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.