ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ 'ಅತ್ಯಂತ ಕ್ರೂರವಾಗಿ' ವರ್ತಿಸಿದೆ: ಸುಪ್ರೀಂ ಕೋರ್ಟ್ ಗೆ ಕೇಜ್ರಿವಾಲ್
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು(ಇಡಿ) "ಅತ್ಯಂತ ಕ್ರೂರವಾಗಿ" ವರ್ತಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು(ಇಡಿ) "ಅತ್ಯಂತ ಕ್ರೂರವಾಗಿ" ವರ್ತಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಇಡಿ ಸಲ್ಲಿಸಿದ ಅಫಿಡವಿಟ್‌ಗೆ ಪ್ರತ್ಯುತ್ತರ ನೀಡಿರುವ ಕೇಜ್ರಿವಾಲ್ ಅವರು, ತಾನು ಯಾವಾಗಲೂ ತನಿಖೆಗೆ ಸಹಕರಿಸಿರುವುದಾಗಿ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ, 9 ಬಾರಿ ಸಮನ್ಸ್ ನೀಡಿದರೂ ತನಿಖಾಧಿಕಾರಿ(ಐಒ) ಮುಂದೆ ಹಾಜರಾಗದಿರುವುದು ಅವರ ಬಂಧನಕ್ಕೆ ಪ್ರಮುಖ ಕಾರಣ ಎಂದು ಇಡಿ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.
"ಇಡಿಯ ಪ್ರತಿ ಸಮನ್ಸ್ ಗೂ ಸರಿಯಾಗಿ ಪ್ರತಿಕ್ರಿಯೆ ನೀಡಲಾಗಿದೆ. ಬರವಣಿಗೆ ಮೂಲಕ ಅಥವಾ ವರ್ಚವಲ್ ಆಗಿ ಉತ್ತರ ನೀಡಲು ಅಥವಾ ಹಾಜರಾಗಲು ಅವಕಾಶಗಳು ಇರುವಾಗ ಭೈತಿಕ ಉಪಸ್ಥಿತಿಯನ್ನೇ ಬೇಡುವುದು ಎಷ್ಟು ಸರಿ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಅಲ್ಲದೆ ತಮ್ಮ ಮನವಿ ಪರಿಗಣನೆಗೆ ಅರ್ಹವಾಗಿದ್ದು, ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ದೆಹಲಿ ಸಿಎಂ ಕೋರಿದ್ದಾರೆ.
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದ್ದು, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 7 ರವರೆಗೆ ವಿಸ್ತರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




