ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಗಾಯಗೊಂಡ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ.
ಘಟನೆಯ ನಂತರ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಅಸನ್ಸೋಲ್ನಲ್ಲಿ ಟಿಎಂಸಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರ ಪರ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿದ್ದಾರೆ.
ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಅವರು ಎರಡನೇ ಬಾರಿ ಗಾಯಗೊಂಡಿದ್ದಾರೆ. ಮಾರ್ಚ್ 14 ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದಲ್ಲಿ ಬಿದ್ದು ಅವರ ಹಣೆ ಮತ್ತು ಮೂಗಿನ ಮೇಲೆ ಗಾಯವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



